ಮನೆ ರಾಜಕೀಯ ಕೊರೊನಾ ಅಬ್ಬರ: ಇಂದು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆ

ಕೊರೊನಾ ಅಬ್ಬರ: ಇಂದು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆ

0

ನವದೆಹಲಿ: ದೇಶದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಲೇ ಇರುವ ಕಾರಣದಿಂದಾಗಿ  ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಕರ್ನಾಟಕ ರಾಜ್ಯದಲ್ಲಿಯೂ ಕೂಡ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇರುವುದರಿಂದ ಪ್ರಧಾನಮಂತ್ರಿಗಳ ಸೂಚನೆಗಳಿಗೆ ರಾಜ್ಯ ಎದುರು ನೋಡುತ್ತಿದೆ. 

ರಾಜ್ಯದಲ್ಲಿ ಫೆಬ್ರವರಿ ತಿಂಗಳಿನಲ್ಲಿ ಗರಿಷ್ಠ ಪ್ರಮಾಣಕ್ಕೆ ಸೋಂಕು ತಲುಪಲಿದ್ದು, ಕೊರೋನಾ 3ನೇ ಅಲೆ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. 

ರಾಜ್ಯದಲ್ಲಿ ಈಗಾಗಲೇ ವೀಕೆಂಡ್, ನೈಟ್ ಕರ್ಫ್ಯೂ ಸೇರಿದಂತೆ ಇತರೆ ಕಠಿಣ ನಿಯಮ ಜಾರಿಗೆ ತಂದರೂ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಇದರ ಮಧ್ಯೆ ಮುಖ್ಯಮಂತ್ರಿಗಳ ಜತೆ ಮೋದಿ ಸಭೆ ಮಾಡುತ್ತಿದ್ದು, ಲಾಕ್‌ಡೌನ್ ಹಾಗೂ ಕಠಿಣ ನಿಯಮಗಳ ಬಗ್ಗೆ ಬಗ್ಗೆ ಚರ್ಚೆಯಾಗಲಿದೆ. ಅಲ್ಲದೇ ಇನ್ನಷ್ಟು ಕಠಿಣ ಕ್ರಮಕೈಗೊಳ್ಳಿ ಎಂದು ಮೋದಿ ಸಲಹೆ ನೀಡುವ ಸಾಧ್ಯತೆಗಳಿವೆಯೇ ಎಂಬುದನ್ನು ಕಾದು ನೋಡಬೇಕಾಗಿದೆ.

ಕೊರೊನಾ ಮೂರನೇ ಅಲೆ ಎದುರಿಸಲು ಸಿದ್ದತೆಗಳ ಬಗ್ಗೆ ಸಭೆಯಲ್ಲಿ ಪರಾಮರ್ಶೆ ನಡೆಯಬಹುದು. ಮಕ್ಕಳಿಗಾಗಿ ಮಾಡಿಕೊಂಡ ವಿಶೇಷ ತಯಾರಿಗಳು, ಕೇಂದ್ರ ತಾಂತ್ರಿಕ ನೆರವಿನ ಅವಶ್ಯಕತೆ ಕೇಳಬಹುದು. ಸೋಂಕು ನಿಯಂತ್ರಣಕ್ಕೆ ಟಫ್ ರೂಲ್ಸ್ ಜಾರಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 

ಸಭೆ ಬಳಿಕ ಲಾಕ್‍ಡೌನ್ ಹೆಸರು ಹೇಳದೇ ಸರ್ಕಾರ ಕಠಿಣ ನಿಯಮಗಳನ್ನು ಜಾರಿ ಮಾಡುವ ಸಾಧ್ಯತೆಯಿದೆ. ಪ್ರಧಾನಿ ಮೋದಿ ಸಲಹೆ ಸೂಚನೆಗಳನ್ನ ಆಧರಿಸಿ, ಬಳಿಕ ತಜ್ಞರ ವರದಿಯನ್ನು ಪಡೆದುಕೊಂಡು ಸರ್ಕಾರ ಕಠಿಣ ಕ್ರಮಕೈಗೊಳ್ಳುವ ಸಾಧ್ಯತೆಗಳಿವೆ. 

ಹಿಂದಿನ ಲೇಖನನಿತಿನ್ ಗಡ್ಕರಿಗೆ ಮತ್ತೆ ಕೋವಿಡ್
ಮುಂದಿನ ಲೇಖನಕೊರೋನಾ: ಇಂದು 2.47 ಲಕ್ಷ ಹೊಸ ಕೇಸ್ ಪತ್ತೆ