ಮನೆ ಸುದ್ದಿ ಜಾಲ ಕೊರೋನಾ ಅಬ್ಬರ: 1.94 ಲಕ್ಷ ಹೊಸ ಪ್ರಕರಣ ಪತ್ತೆ, 442 ಮಂದಿ ಸಾವು

ಕೊರೋನಾ ಅಬ್ಬರ: 1.94 ಲಕ್ಷ ಹೊಸ ಪ್ರಕರಣ ಪತ್ತೆ, 442 ಮಂದಿ ಸಾವು

0

ನವದೆಹಲಿ: ಕೋವಿಡ್‍್ ಸೋಂಕು ದಿನೇ ದಿನೇ ಹೆಚ್ಚಾಗುತ್ತಲಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,94,720 ಹೊಸ ಪ್ರಕರಣಗಳು ಪತ್ತೆಯಾಗಿದ್ದು 442 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,60,70,510ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,84,655ಕ್ಕೆ ಏರಿಕೆಯಾಗಿರುವ ಕುರಿತು ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 9,55,319ಕ್ಕೆ ತಲುಪಿದೆ.ಈ ನಡುವೆ ಕಳೆದ 24 ಗಂಟೆಗಳಲ್ಲಿ 60,405 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,46,30,536ಕ್ಕೆ ತಲುಪಿದೆ.

ಭಾರತದಲ್ಲಿ ಒಂದೇ ದಿನ 17,61,900 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 69,52,74,380 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,53,80,08,200 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.