ಮನೆ ರಾಜಕೀಯ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆಗೆ ಲೋಕಸಭೆಯಲ್ಲೂ ತೀವ್ರ ಖಂಡನೆ

ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆಗೆ ಲೋಕಸಭೆಯಲ್ಲೂ ತೀವ್ರ ಖಂಡನೆ

0

ನವದೆಹಲಿ: ಸದನದಲ್ಲಿ ಮಾಜಿ ಸ್ಪೀಕರ್​ ರಮೇಶ್ ಕುಮಾರ್ ಹೇಳಿದ್ದ  ರೇಪ್ ಆಸ್ವಾದಿಸಿ ಎಂಬ ವಿವಾದಾತ್ಮಕ ಹೇಳಿಕೆಗೆ ರಮೇಶ್​ ಕಮಾರ್​ ಕ್ಷಮೆ ಕೇಳುವ ಮೂಲಕ ಅಂತ್ಯಕಂಡಿದೆ. ಆದ್ರೇ ಈಗ ರಮೇಶ್ ಕುಮಾರ್ ಅವರ ವಿವಾದಾತ್ಮಕ ಹೇಳಿಕೆ ರಾಜ್ಯಕ್ಕಷ್ಟೇ ಸೀಮಿತವಾಗದೇ, ಲೋಕಸಭೆಯಲ್ಲೂ ಪ್ರತಿಧ್ವನಿಸಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸದನದಲ್ಲಿ ಹೇಳಿದ ರೇಪ್ ಹೇಳಿಕೆಯನ್ನ ಇಂದು ಲೋಕಸಭೆಯಲ್ಲೂ ಪ್ರಸ್ತಾಪಿಸಿದ್ದಾರೆ. ಅಲ್ಲದೇ ಈ ಹೇಳಿಕೆಯನ್ನ ಖಂಡಿಸಿದ್ದಾರೆ.

ಇಂದಿನ ಲೋಕಸಭೆಯ ಕಲಾಪ ಆರಂಭವಾಗುತ್ತಿದ್ದಂತ ಭಿತ್ತಿ ಪತ್ರ ಪ್ರದರ್ಶಿಸುತ್ತಲೇ ತಮ್ಮ ಮಾತು ಆರಂಭಿಸಿದಂತ ಇರಾನಿ, ಕರ್ನಾಟಕದ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅತ್ಯಾಚಾರ ತಡೆಯೋದಕ್ಕೆ ಸಾಧ್ಯವಾಗದೇ ಇದ್ದಾಗ ಅದನ್ನ ಆನಂದಿಸಿ ಎಂಬುದಾಗಿ ಹೇಳಿದ್ದಾರೆ. ಇದು ನಿಜಕ್ಕೂ ಖಂಡನೀಯ. ಮಹಿಳೆಯರ ಬಗ್ಗೆ ಕೇವಲವಾಗಿ ಮಾತನಾಡಿದಂತೆ ಆಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಈ ಮೂಲಕ ರಮೇಶ್ ಕುಮಾರ್ ವಿವಾದಾತ್ಮಕ ಹೇಳಿಕೆ ಸಂಸತ್ ನಲ್ಲಿಯೂ ಸದ್ದುಮಾಡುವಂತೆ ಮಾಡಿತು.