ಮನೆ ಅಪರಾಧ ಮುಕ್ತ ವಿವಿ ಕುಲಪತಿ ಸೇರಿದಂತೆ ಕೆಲವು ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು

ಮುಕ್ತ ವಿವಿ ಕುಲಪತಿ ಸೇರಿದಂತೆ ಕೆಲವು ಅಧಿಕಾರಿಗಳ ವಿರುದ್ಧ ಎಸಿಬಿಗೆ ದೂರು

0

ಮೈಸೂರುಮುಕ್ತ ವಿವಿಯಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ಮುಕ್ತ ವಿವಿ ಕುಲಪತಿ ಡಾ.ಎಸ್.ವಿದ್ಯಾಶಂಕರ್ ಸೇರಿದಂತೆ ಕೆಲವು ಅಧಿಕಾರಿಗಳ ವಿರುದ್ಧ ಮೈಸೂರು ಸಾಂಸ್ಕೃತಿಕ ಮತ್ತು ಶೈಕ್ಷಣಿಕ ವೇದಿಕೆ ಅಧ್ಯಕ್ಷ ವರುಣಾ ಮಹೇಶ್ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ.

ಮುಕ್ತ ವಿವಿ ಕುಲಪತಿ, ಕುಲಸಚಿವರು, ಹಣಕಾಸು ಅಧಿಕಾರಿಗಳು ಸೇರಿದಂತೆ ಹಲವರ ವಿರುದ್ಧ ಸುದೀರ್ಘ 9 ಪುಟಗಳ ದೂರು ಸಲ್ಲಿಸಿರುವ ವರುಣಾ ಮಹೇಶ್ ಮುಕ್ತ ವಿವಿಯಲ್ಲಿ ನಡೆದಿರುವ ಭ್ರಷ್ಟಾಚಾರ ಕುರಿತು ಸೂಕ್ತ ತನಿಖೆ ನಡೆಸಿ ಕ್ರಮ ವಹಿಸಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

ವಿವಿಯಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ನೇಮಕ ವಿಚಾರದಲ್ಲಿ ವಿವಿಯ ಎಲ್ಲ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ವಿವಿ ಸಂಕಷ್ಟದಲ್ಲಿದ್ದರೂ ಇದ್ಯಾವುದನ್ನು ಲೆಕ್ಕಿಸದೇ ನಿಯಮಗಳನ್ನು ಮೀರಿ ಸಿಬ್ಬಂದಿ ನೇಮಕ ಸೇರಿದಂತೆ ಹಲವಾರು ವಿಚಾರಗಳಲ್ಲಿ ಭ್ರಷ್ಟಾಚಾರ ಎಸಗಲಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.