ಸಾಂಸ್ಕೃತಿಕ ನಗರಿ ಮೈಸೂರನ್ನು ಬೆಚ್ಚಿಬೀಳಿಸಿದ್ದ ನಕಲಿ ತುಪ್ಪ ತಯಾರಿಕೆ ಜಾಲ ಇದೀಗ ಮೈಮುಲ್ ಅಧಿಕಾರಿಗಳ ನಿದ್ದೆಗೆಡಿಸಿದೆ. ನಕಲಿ ನಂದಿನಿ ತುಪ್ಪ ತಯಾರಿಕಾ ಘಟಕ ಪತ್ತೆಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಮೈಮುಲ್ ಅಧಿಕಾರಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೈಮುಲ್ ಅಧ್ಯಕ್ಷ ಪ್ರಸನ್ನ, “ಈ ಬಗ್ಗೆ ಮುರುಗೇಶ್, ಅಶ್ವಿನಿ, ಸಂತೋಷ್, ಕುಮಾರ್ ಎಂಬುವವರ ವಿರುದ್ಧ ನೇರವಾಗಿ ಎಸ್ಪಿಗೆ ದೂರು ನೀಡಿದ್ದು, ಈ ಸಂಬಂಧ ಎಫ್ಐಆರ್ ಕೂಡ ದಾಖಲಾದೆ” ಎಂದರು.