ಮನೆ ಸುದ್ದಿ ಜಾಲ ಸಿಎಂ ಪುತ್ರ ಭರತ್ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್

ಸಿಎಂ ಪುತ್ರ ಭರತ್ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬಸ್ಥರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಇಂದು ಪುತ್ರನ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಉಳಿದ ಸದಸ್ಯರ ವರದಿ ನಿರೀಕ್ಷಿಸಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಕುಟುಂಬದ ಸದಸ್ಯರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದ್ದು, ಪುತ್ರ ಭರತ್ ಬೊಮ್ಮಾಯಿ ಅವರಿಗೆ ಕೋವಿಡ್ ದೃಢಪಟ್ಟಿದೆ.


ಲಘು ರೋಗ ಲಕ್ಷಣಗಳ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಐಸೊಲೇಟ್ ಆಗಿರುವ ಭರತ್ ಬೊಮ್ಮಾಯಿ, ಇತ್ತೀಚೆಗೆ ತಮ್ಮ ಜೊತೆ ಸಂಪರ್ಕಕ್ಕೆ ಬಂದಿದ್ದವರು ಕೋವಿಡ್ ತಪಾಸಣೆಗೆ ಒಳಪಡುವಂತೆ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಸಿಎಂ ಬೊಮ್ಮಾಯಿ ಅವರು ಆರ್.ಟಿ ನಗರದ ಖಾಸಗಿ ನಿವಾಸ, ರೇಸ್ ಕೋರ್ಸ್ ರಸ್ತೆಯ ಸರ್ಕಾರಿ ನಿವಾಸ, ಗೃಹ ಕಚೇರಿ ಕೃಷ್ಣಾ ಮೂರು ಕಡೆ ನಿನ್ನೆ ಕರ್ತವ್ಯ ನಿರ್ವಹಿಸಿದ್ದಾರೆ. ಹೀಗಾಗಿ ಕುಟುಂಬ ಸದಸ್ಯರು, ಖಾಸಗಿ, ಸರ್ಕಾರಿ ನಿವಾಸದ ಸಿಬ್ಬಂದಿ, ಗೃಹ ಕಚೇರಿ ಸಿಬ್ಬಂದಿಗೆ ಕೋವಿಡ್ ತಪಾಸಣೆ ಮಾಡಲಾಗಿದ್ದು, ವರದಿ ನಿರೀಕ್ಷಿಸಲಾಗಿದೆ.

ಕೊರೊನಾ ಪಾಸಿಟಿವ್ ಆಗಿರುವ ಹಿನ್ನೆಲೆ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಸಿಎಂ ಬೊಮ್ಮಾಯಿ ತೆರಳಿದ್ದಾರೆ.

ಹಿಂದಿನ ಲೇಖನರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡಲ್ಲ: ಸಚಿವ ಬಿ.ಸಿನಾಗೇಶ್
ಮುಂದಿನ ಲೇಖನಕರುಳ ಕುಡಿಯನ್ನೇ ಕೊಚ್ಚಿ ಕೊಲೆ ಮಾಡಿದ ಮಾನಸಿಕ ಅಸ್ವಸ್ಥ ತಾಯಿ!