ಮನೆ ರಾಜಕೀಯ ಹೈಕೋರ್ಟ್ ಆದೇಶಿಸಿದರೆ ಪಾದಯಾತ್ರೆ ನಿಲ್ಲಿಸುತ್ತೇವೆ: ವಿಪಕ್ಷ ನಾಯಕ ಸಿದ್ಧರಾಮಯ್ಯ

ಹೈಕೋರ್ಟ್ ಆದೇಶಿಸಿದರೆ ಪಾದಯಾತ್ರೆ ನಿಲ್ಲಿಸುತ್ತೇವೆ: ವಿಪಕ್ಷ ನಾಯಕ ಸಿದ್ಧರಾಮಯ್ಯ

0

ಬೆಂಗಳೂರು: ಮೇಕೆದಾಟು ಶೀಘ್ರವಾಗಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ನಿಲ್ಲಿಸುವಂತೆ ಹೈಕೋರ್ಟ್ ಆದೇಶ ಮಾಡಿದರೆ ನಿಲ್ಲಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ತಿಳಿಸಿದರು.

ಈ ಕುರಿತು ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ನಾವು ಹೈಕೋರ್ಟ್ ಆದೇಶದ ವಿರುದ್ಧವಾಗಿ ನಡೆದುಕೊಳ್ಳಲ್ಲ. ನೆಲದ ಕಾನೂನು ಬಗ್ಗೆ ಗೌರವವಿದೆ. ನೆಲದ ಕಾನೂನು ಬಗ್ಗೆ ಬಿಜೆಪಿಗೆ ನಂಬಿಕೆ ಇಲ್ಲ. ಬಿಜೆಪಿ ಶಾಸಕರೇ ನಿಯಮ ಉಲ್ಲಂಘಿಸಿದ್ದಾರೆ. ನಿಯಮ ಪಾಲಿಸುವಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿದ್ದಾರೆ ಎಂದು ಕಿಡಿಕಾರಿದರು.

ಭಾರತಕ್ಕೆ ಐದನೇ ಚಿನ್ನದ ಪದಕ ಗೆಲ್ಲಿಸಿಕೊಟ್ಟ ಶಟ್ಲರ್ ಕೃಷ್ಣ ನಗರ್

ಶಾಸಕ ರೇಣುಕಾಚಾರ್ಯ  ವಿರುದ್ಧ ಯಾಕೆ ಪ್ರಕರಣ ದಾಖಲಿಸಿಲ್ಲ. ಗೃಹ ಸಚಿವರ ಕ್ಷೇತ್ರದಲ್ಲೇ ರ್ಯಾಲಿ ನಡೆದಿದೆ.  ಬಿಜೆಪಿಯವರೇ ನಿಯಮ ಪಾಲಿಸುತ್ತಿಲ್ಲ.  ಕೋವಿಡ್ ಹೆಚ್ಚಾಗಲು ಪ್ರಧಾನಿ, ರಾಜ್ಯ ಸರ್ಕಾರ ಕಾರಣ. ಕೊರೋನಾ ಹೆಚ್ಚಿರುವ ರಾಜ್ಯಗಳಲ್ಲಿ ಮೋದಿ ರ್ಯಾಲಿ ನಡೆಸಿದ್ದಾರೆ ಎಂದು ಕಿಡಿಕಾರಿದರು.

ಹಿಂದಿನ ಲೇಖನಕೊರೊನಾ ಹಬ್ಬಿಸಿ ಕರ್ನಾಟಕವನ್ನು ಕೋವಿಡ್ ಹಬ್ ಮಾಡುವ ಉದ್ದೇಶ ಹೊಂದಿರುವ ಕಾಂಗ್ರೆಸ್: ಸಚಿವ ಎಸ್’ಟಿ ಸೋಮಶೇಖರ್
ಮುಂದಿನ ಲೇಖನಹೈಕೋರ್ಟ್ ತಪರಾಕಿ ನಂತರ ಐದನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ ಅಂತ್ಯ