ಮನೆ ರಾಜಕೀಯ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಿ: ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್

ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಿ: ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್

0

ಬೆಂಗಳೂರು:   ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್ ಹೇಳಿದ್ದಾರೆ.

ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಕುರಿತು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ತಮ್ಮ ನೇತೃತ್ವದಲ್ಲಿ ನಡೆದ ಮೂರು ತಾಸುಗಳ ಸಭೆಯ ನಂತರ ಅವರು ಈ ಭರವಸೆ ನೀಡಿದರು. ಸಭೆಯಲ್ಲಿ ಉಪನ್ಯಾಸಕರಿಗೆ ಸಂಬಂಧಿಸಿದ ನಾಲ್ಕೈದು ಸಂಘಗಳ ಪ್ರತಿನಿಧಿಗಳೂ ಭಾಗವಹಿಸಿದ್ದರು.

ನಂತರ ಮಾತನಾಡಿದ ಸಚಿವ ಅಶ್ವಥ್ ನಾರಾಯಣ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು. ಸಿಎಂ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರಣ ಒಂದೆರಡು ದಿನಗಳಲ್ಲಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು. ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದಲ್ಲಿ ಆರ್ಥಿಕ ಹೊರೆ ಮುಂತಾದ ಅಂಶಗಳಿವೆ. ಒಟ್ಟಿನಲ್ಲಿ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ ಎಂದರು.

ಹಿಂದಿನ ಲೇಖನಮಾನಸ ಗಂಗೋತ್ರಿಯ ಆವರಣದಲ್ಲಿ ಅರಳಿ ನಿಂತ ಟಬುಬಿಯಾ ಹೂ
ಮುಂದಿನ ಲೇಖನಸ್ವಾಮಿ ವಿವೇಕಾನಂದ ಜಯಂತಿ: ಪ್ರಧಾನಿ ಸೇರಿ ಗಣ್ಯರಿಂದ ಸ್ಮರಣೆ