ಮನೆ ರಾಜಕೀಯ ಉಳಿದೆಲ್ಲಾ ಕೊರೊನಾ ರೂಪಾಂತರಿಗಳಿಗಿಂತ ಓಮಿಕ್ರಾನ್ ವೇಗ ಹೆಚ್ಚು: ಮೋದಿ

ಉಳಿದೆಲ್ಲಾ ಕೊರೊನಾ ರೂಪಾಂತರಿಗಳಿಗಿಂತ ಓಮಿಕ್ರಾನ್ ವೇಗ ಹೆಚ್ಚು: ಮೋದಿ

0

ದೇಶಾದ್ಯಂತ ಓಮಿಕ್ರಾನ್ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ದೇಶಾದ್ಯಂತ ನಡೆಯುತ್ತಿರುವ ಹಬ್ಬದ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಲಸಿಕೆ ಒಂದು ಉತ್ತಮ ಮಾರ್ಗವಾಗಿದೆ, ಕೋವಿಡ್ ಲಸಿಕೆಯನ್ನು ಇನ್ನೂ ತೆಗೆದುಕೊಳ್ಳದ ಅರ್ಹ ಜನರು ಲಸಿಕೆ ಹಾಕಿಸಿಕೊಳ್ಳುವಂತೆ ಒತ್ತಾಯಿಸಿದರು. ಭಾರತದಲ್ಲಿ ಕೊರೊನಾ ನಾಗಾಲೋಟ ಮುಂದುವರೆದಿದ್ದು, ಗುರುವಾರ 2,47,417 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದೆ. ಅಲ್ಲದೆ, 442 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,63,17,927ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,85,035ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,17,531ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 84,825 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,47,15,361ಕ್ಕೆ ತಲುಪಿದೆ. ಇನ್ನು ಭಾರತದಲ್ಲಿ ಒಂದೇ 18,86,935 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 69,73,11,627 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ. ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

Read more at: https://kannada.oneindia.com/news/india/modi-says-compared-to-previous-variants-omicron-is-rapidly-spreading-244899.html