ಮನೆ ಸುದ್ದಿ ಜಾಲ ಕೊರೋನಾ: ಇಂದು 2.47 ಲಕ್ಷ ಹೊಸ ಕೇಸ್ ಪತ್ತೆ

ಕೊರೋನಾ: ಇಂದು 2.47 ಲಕ್ಷ ಹೊಸ ಕೇಸ್ ಪತ್ತೆ

0

ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳು ಸಂಖ್ಯೆ ಹೆಚ್ಚುತ್ತಲೇ ಇದ್ದು, ಗುರುವಾರ 2,47,417 ಕೊರೋನಾ ಪ್ರಕರಣಗಳು ದಾಖಲಾಗಿದ್ದು,  442 ಮಂದಿ ಸಾವನ್ನಪ್ಪಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,63,17,927ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,85,035ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,17,531ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 84,825 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,47,15,361ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 18,86,935 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 69,73,11,627 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಹಿಂದಿನ ಲೇಖನಕೊರೊನಾ ಅಬ್ಬರ: ಇಂದು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆ
ಮುಂದಿನ ಲೇಖನಕೊರೊನಾ ಹಬ್ಬಿಸಿ ಕರ್ನಾಟಕವನ್ನು ಕೋವಿಡ್ ಹಬ್ ಮಾಡುವ ಉದ್ದೇಶ ಹೊಂದಿರುವ ಕಾಂಗ್ರೆಸ್: ಸಚಿವ ಎಸ್’ಟಿ ಸೋಮಶೇಖರ್