ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಮತ್ತೆ ಉಲ್ಬಣಗೊಂಡಿದ್ದು, ಈ ಹಿಂದೆ ಸೋಂಕಿನಿಂದ ಚೇತರಿಸಿಕೊಂಡಿದ್ದ ನಿತಿನ್ ಗಡ್ಕರಿ ಅವರಿಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್ ಆಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ತಮಗೆ ಸೋಂಕಿನ ಸೌಮ್ಯ ಲಕ್ಷಣಗಳು ಕಂಡು ಬಂದಿದ್ದು, ವರದಿಯಲ್ಲಿ ಕೋವಿಡ್ ಪಾಸಿಟಿವ್ ಆಗಿದೆ. ಈ ಹಿನ್ನಲೆ ಮನೆಯಲ್ಲಿಯೇ ಐಸೋಲೇಷನ್ಗೆ ಒಳಗಾಗುತ್ತಿದ್ದೇನೆ. ತಮ್ಮ ಸಂಪರ್ಕಕ್ಕೆ ಒಳಗಾದವರು ಸುರಕ್ಷೆ ವಹಿಸುವಂತೆ ಸೂಚಿಸಲಾಗಿದೆ.
ಪಂಜಾಬ್ ಮಾಜಿ ಸಿಎಂಗೆ ಸೋಂಕು: ಇನ್ನು ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಕೂಡ ತಮಗೆ ಸೋಂಕು ದೃಢವಾಗಿರುವ ಸಂಬಂಧ ಇಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಪಂಜಾಬ್ ವಿಧಾನಸಭಾ ಚುನಾವಣೆಗೆ ಒಂದು ತಿಂಗಳು ಇರಬೇಕಾದರೆ ಅವರು ಸೋಂಕಿಗೆ ತುತ್ತಾಗಿದ್ದು, ಚುನಾವಣಾ ಪ್ರಚಾರ ಸಮಾವೇಶದಿಂದ ಹೊರಗುಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಇನ್ನು ಇದೇ ವೇಳೆ ಪಂಜಾಬ್ ಸಾರಿಗೆ ಸಚಿವ ಅಮರಿಂದರ್ ಸಿಂಗ್ ರಾಜಾ ಕೂಡ ಸೋಂಕಿಗೆ ತುತ್ತಾಗಿದ್ದು. ಮನೆಯಲ್ಲಿಯೇ ಐಸೋಲೇಷನ್ಗೆ ಒಳಗಾಗಿದ್ದಾರೆ
ಚೇತರಿಸಿಕೊಳ್ಳುತ್ತಿರುವ ರಾಜನಾಥ್ ಸಿಂಗ್: ಕಳೆದ ಮೂರು ದಿನಗಳ ಹಿಂದೆ ಅಂದರೆ ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಕೂಡ ಸೋಂಕಿಗೆ ತುತ್ತಾಗಿದ್ದರು. ಈ ಸಂಬಂಧ ಟ್ವೀಟ್ ಮೂಲಕ ದೃಢ ಪಡಿಸಿದ್ದರು. ಸದ್ಯ ಅವರು ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸೇನಾ ಆಸ್ಪತ್ರೆ ವೈದ್ಯರ ತಂಡ ತಿಳಿಸಿದೆ. ಇದೇ ವೇಳೆ ಪಂಜಾಬ್ ಕಾಂಗ್ರೆಸ್ ಸಂಸದ ಪಟಿಯಾಲ ಕೂಡ ಸೋಂಕಿಗೆ ತುತ್ತಾಗಿದ್ದಾರೆ.