ಮೈಸೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಚುರುಕುಗೊಳಿಸಿದ್ದು ಈ ಮಧ್ಯೆ ಇಬ್ಬರು ಆರೋಪಿಗಳಿಗೆ ನಾಳೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಲಾಗಿದೆ.
ಪ್ರಕರಣ ಸಂಬಂಧ ಎ3 ಆಗಿರುವ ಮಲ್ಲಿಕಾರ್ಜುನಸ್ವಾಮಿ ಮತ್ತು ಎ4 ಜಮೀನು ಮಾಲೀಕ ದೇವರಾಜುಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ ಐಆರ್ ದಾಖಲಾಗಿದ್ದು ಎಸ್ಪಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮೊದಲ ಆರೋಪಿ ಸಿಎಂ ಪತ್ನಿ ಪಾರ್ವತಿ ಅವರು ಎರಡನೇ ಆರೋಪಿಯಾಗಿದ್ದಾರೆ.