ಮನೆ ಸುದ್ದಿ ಜಾಲ ರೈತರ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ

ರೈತರ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ

0

ಚಾಮರಾಜನಗರ (chamarajanagar): ಚಾಮರಾಜನಗರದಲ್ಲಿ ರೈತರ ಮೇಲೆ ದಾಳಿ ನಡೆಸಿದ್ದ ಹುಲಿ ಕೊನೆಗೂ ಸೆರೆ ಸಿಕ್ಕಿದೆ.
ಬಾಳೆ ತೋಟದಲ್ಲಿ ಅಡಗಿ ಕುಳಿತಿದ್ದ ಹುಲಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.‌
ಬಾಳೆ ತೋಟದಲ್ಲಿ ಅಡಗಿದ್ದ  ಹುಲಿಗೆ  ಮೂರು ಬಾರಿ ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಮಳೆ ನಡುವೆ ಯಶಸ್ವಿ ಕಾರ್ಯಾಚರಣೆ ನಡೆಸಲಾಗಿದೆ. ಗಾಯಗೊಂಡಿರುವ ಹುಲಿಯನ್ನು ಚಿಕಿತ್ಸೆಗೆ ಮೈಸೂರಿಗೆ ರವಾನಿಸಲಾಗಿದೆ.

ಹುಲಿಗೆ  ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯಲಾಗಿದೆ. ಈ ನಡುವೆ ಕಾರ್ಯಾಚರಣೆಗೆ ಮಳೆ ಅಡ್ಡಿಯಾಗಿತ್ತು. ದಸರಾ ಆನೆ ಅಭಿಮನ್ಯು ಹಾಗೂ ಶ್ರೀಕಂಠನನ್ನು ಬಳಸಿಕೊಂಡು ಕಾರ್ಯಾಚರಣೆ ನಡೆಸಲಾಗಿತ್ತು.

ಬಂಡೀಪುರ ವ್ಯಾಪ್ತಿಯ ಗೋಪಾಲಪುರದಲ್ಲಿ ನಿನ್ನೆ 2 ಹಸು ಕೊಂದು ಇಬ್ಬರು ರೈತರ ಮೇಲೆ ಈ ಹುಲಿ ದಾಳಿ  ನಡೆಸಿತ್ತು.

ಹಿಂದಿನ ಲೇಖನಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆ
ಮುಂದಿನ ಲೇಖನಮರವಂತೆ ಬೀಚ್ ಗೆ ಉರುಳಿದ ಕಾರು: ಓರ್ವನ ಸಾವು