ವ್ಯಕ್ತಿ ಸ್ವಾತಂತ್ರ್ಯ ಕುರಿತಂತೆ ನ್ಯಾ. ಡಿ ವೈ ಚಂದ್ರಚೂಡ್‌ ನಿರ್ಧರಿಸಿದ ಐದು ಪ್ರಕರಣಗಳು ಇವು

0

ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾ ಮಿ ಅವರಿಗೆ ಜಾಮೀನು ನೀಡಿದೆ. ದಿನವಿಡೀ ನಡೆದ ವಿಚಾರಣೆ ವೇಳೆ ವ್ಯಕ್ತಿ ಸ್ವಾತಂತ್ರ್ಯ ಮತ್ತು ಸಂವಿಧಾನಾತ್ಮಕ ನ್ಯಾಯಾಲಯಗಳನ್ನು ರಕ್ಷಿಸುವ ಜವಾಬ್ದಾರಿಯೊಂದಿಗೆ ನ್ಯಾ. ಚಂದ್ರಚೂಡ್‌ ಅವರು ಕೆಲ ಅಭಿಪ್ರಾಯ ದಾಖಲಿಸಿದರು.

“ಪ್ರಸ್ತುತ ಪ್ರಕರಣದಲ್ಲಿ ಮಧ್ಯಪ್ರವೇಶಿಸದಿದ್ದರೆ ವಿನಾಶದ ಹಾದಿಯಲ್ಲಿ ನಾವು ಮುಂದುವರಿಯುತ್ತೇವೆ. ನನ್ನ ಆಯ್ಕೆಗೇ ಬಿಟ್ಟರೆ, ನಾನು ಆ ವಾಹಿನಿಯನ್ನು (ರಿಪಬ್ಲಿಕ್) ನೋಡುವುದಿಲ್ಲ. ನೀವು ಸೈದ್ಧಾಂತಿಕವಾಗಿ ಭಿನ್ನವಾಗಿರಬಹುದು ಆದರೆ ಸಾಂವಿಧಾನಿಕ ನ್ಯಾಯಾಲಯಗಳು ಅಂತಹ ಸ್ವಾತಂತ್ರ್ಯವನ್ನು ರಕ್ಷಿಸಬೇಕಾಗುತ್ತದೆ. ಇಲ್ಲವಾದರೆ ನಾವು ವಿನಾಶದ ಹಾದಿಯಲ್ಲಿ ಸಾಗುತ್ತೇವೆ.” ಎಂದು ಹೇಳಿದ್ದರು.

ಸೂಕ್ತ ನ್ಯಾಯಾಲಯವನ್ನು ಸಂಪರ್ಕಿಸುವಂತೆ ಸೂಚಿಸಿ ಗೋಸ್ವಾಮಿ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದನ್ನು ಗಮನಿಸಿದ ನ್ಯಾಯಮೂರ್ತಿ ಚಂದ್ರಚೂಡ್‌, ʼತಾಂತ್ರಿಕತೆ ಎಂಬುದು ಯಾರದೇ ಸ್ವಾತಂತ್ರ್ಯವನ್ನು ನಿರಾಕರಿಸುವ ಭೂಮಿಕೆಯಾಗಬಾರದು” ಎಂದು ಪ್ರತಿಕ್ರಿಯಿಸಿದ್ದರು. ಅರ್ನಾಬ್‌ ಅವರಿಗೆ ಜಾಮೀನು ನೀಡಿದ್ದರಿಂದಾಗಿ ಇಂತದ್ದೇ ಪ್ರಕರಣಗಳಲ್ಲಿ ಅನೇಕ ಆರೋಪಿತ ವ್ಯಕ್ತಿಗಳಿಗೆ ಹಾಗೂ ಸಾಮಾಜಿಕ ಹೋರಾಟಗಾರರಿಗೆ ಜಾಮೀನು ದೊರೆಯದೇ ಇದ್ದುದು ಕಿಡಿ ಹೊತ್ತಿಕೊಳ್ಳಲು ಕಾರಣವಾಯಿತು.

ಮುಂದಿನ ಲೇಖನರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ನಿವೃತ್ತ ಸೂಪರಿಂಟೆಂಡೆಂಟ್ಆಫ್ ಪೊಲೀಸ್ ಎನ್​.ನಾಗರಾಜಸ್ಪರ್ಧೆ