ಮನೆ ಕಾನೂನು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಹಾಗು ಪತ್ನಿಗೆ ಸೇರಿದ...

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹಗರಣ: ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಹಾಗು ಪತ್ನಿಗೆ ಸೇರಿದ ₹13.91 ಕೋಟಿ ಮೌಲ್ಯದ ಆಸ್ತಿ ಜಪ್ತಿ

0

ಬೆಂಗಳೂರು: ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕ್ ಹಣ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್‌ಫೋರ್ಸ್ಮೆಂಟ್ ಡೈರೆಕ್ಟರೇಟ್ (ಇಡಿ) ಮಹತ್ವದ ಕ್ರಮ ಕೈಗೊಂಡಿದ್ದು, ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ್ ಗೌಡ ಹಾಗೂ ಅವರ ಪತ್ನಿಗೆ ಸೇರಿದ ₹13.91 ಕೋಟಿ ಮೌಲ್ಯದ ಆಸ್ತಿಗಳನ್ನು ತಾತ್ಕಾಲಿಕವಾಗಿ ಜಪ್ತಿ ಮಾಡಿದೆ.

ಈ ಕುರಿತಂತೆ ಇಡಿ ತನ್ನ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಕರಣವು ಹಣಕಾಸು ವಂಚನೆ ಮತ್ತು ಕಾನೂನುಬಾಹಿರ ಹಣ ವಂಚಿಸಿದ ಕುರಿತಾಗಿದೆ. ಪಿಎಂಎಲ್‌ಎ, 2002ರ ನಿಬಂಧನೆಗಳಡಿ ಈ ಕ್ರಮ ಕೈಗೊಂಡಿರುವುದಾಗಿ ಸ್ಪಷ್ಟಪಡಿಸಲಾಗಿದೆ.

ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ಹಣವನ್ನು ವಂಚಿಸಿದ ಪ್ರಕರಣದಲ್ಲಿ, ಈಗಾಗಲೇ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಅವರನ್ನು ಬಂಧಿಸಲಾಗಿದೆ. ಅವರು ಜೈಲುಪಾಲಾಗಿದ್ದಾರೆ.