ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲಿಬಾನ್ ರೀತಿ ಸರ್ಕಾರ ನಡೆಸುತ್ತಿದ್ದಾರೆಂಬ ಹೇಳಿಕೆಗೆ ನಾನು ಬದ್ಧನಾಗಿದ್ದೇನೆಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಇಸಿಸ್ ಉಗ್ರ ಸಂಘಟನೆಯಂತೆ ಸರ್ಕಾರ ನಡೆಸುತ್ತಿದ್ದಾರೆ. ಈ ಹೇಳಿಕೆಯನ್ನು ನಿರಾಕರಿಸುವುದಿಲ್ಲ. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದೇನೆ. ಸರ್ಕಾರದ ನಡೆಸುತ್ತಿರುವ ರೀತಿಗೆ ಅಧಿಕಾರ ಕೊಟ್ಟವರು ಯಾರು ಪ್ರಶ್ನಿಸಿದರು.
ಹುಬ್ಬಳ್ಳಿಯಲ್ಲಿ ಸಾಕಷ್ಟು ಮಂದಿಯನ್ನು ಬಂಧನಕ್ಕೊಳಪಡಿಸಲು ಮುಂದಾಗಿದ್ದರು. ನಂತರ ಅಲ್ಲಿನ ಆಯುಕ್ತರನ್ನು ಸಂಪರ್ಕಿಸಿದ್ದೆ. ಬಂಧನಕ್ಕೊಳಪಡಿಸಿದ್ದೇ ಆದರೆ, ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದೆ. ನಂತರ ಈ ಯೋಜನೆಯನ್ನು ಕೈಬಿಡಲಾಗಿತ್ತು ಎಂದು ಹೇಳಿದ್ದಾರೆ.
Saval TV on YouTube