ಮನೆ ಕಾನೂನು ಹಿಜಾಬ್ ವಿವಾದ: ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್

ಹಿಜಾಬ್ ವಿವಾದ: ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್

0

ಬೆಂಗಳೂರು:  ಹಿಜಾಬ್ ವಿವಾದಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಸೋಮವಾರ ಮಧ್ಯಾಹ್ನ 2.30ಕ್ಕೆ ಕ್ಕೆ ಮುಂದೂಡಿದೆ.

ಹೈಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿಗಳನ್ನು ಒಳಗೊಂಡ ತ್ರಿ ಸದಸ್ಯ ಪೀಠದದಲ್ಲಿ ಹಿಜಾಬ್ ವಿಚಾರಣೆ ನಡೆಯುತ್ತಿದ್ದು ಇಂದು ಸರ್ಕಾರದ ಪರ ಎಜಿ ಪ್ರಭುಲಿಂಗ ನಾದವದಗಿ ವಾದ ಮಂಡಿಸಿದರು. ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳಲ್ಲಿ ಸಮವಸ್ತ್ರವನ್ನು ವಿತರಿಸುತ್ತಿದೆ. ಪಿಯು ಕಾಲೇಜುಗಳಲ್ಲಿ ಆ ಸಮವಸ್ತ್ರಗಳಲ್ಲೇ ಧರಿಸಬೇಕು. ಖಾಸಗಿ ಶಾಲೆಗಳಲ್ಲಿ ಆಡಳಿತ ಮಂಡಳಿಗಳಿಂದ ಸಮವಸ್ತ್ರ ನಿಗದಿ ಪಡಿಸಲಾಗಿದೆ. ಪಿಯು ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯು ನಿರ್ಧರಿಸುತ್ತದೆ. ಕಾಲೇಜುಗಳಲ್ಲಿ ಸಮವಸ್ತ್ರ ನೀತಿಯಿಂದ ದೊಡ್ಡ ಸಮಸ್ಯೆ ಏನು ಆಗಿಲ್ಲ. ಸಮಾನತೆ, ಶಿಸ್ತಿಗೆ ಪೂರಕವಾಗಿ ಸಮವಸ್ತ್ರ ಧರಿಸಬೇಕು. ಸಮವಸ್ತ್ರವಿಲ್ಲದ ಕಾಲೇಜುಗಳಲ್ಲಿ ಗೌರವಯುತವಾಗಿ ಸಮವಸ್ತ್ರ ಧರಿಸಬೇಕು ಎಂದು ಹೇಳಿದರು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ತಾಹಿರ್, ಮಧ್ಯಂತರ ಆದೇಶವನ್ನ ಶಾಲೆಗೆ ಅನ್ವಯಿಸಬಾರದು  ಶಿಕ್ಷಕಿಯರೂ ಹಿಜಾಬ್ ಧರಿಸದಂತೆ ತಡೆಯಲಾಗುತ್ತಿದೆ. ಮುಸ್ಲೀಂ ಹೆಣ್ಣುಮಕ್ಕಳಿಗೆ ತೊಂದರೆ ಕೊಡಲಾಗುತ್ತಿದೆ. ಶಾಲೆ ಹೊರಗೆ ಬುರ್ಖಾ ಹಿಜಾಬ್ ತೆಗೆಯುವಂತೆ ಬೆದರಿಕೆ ಹಾಕಲಾಗುತ್ತದೆ ಮಧ್ಯಂತರ ಆದೇಶದ ಬಗ್ಗೆ ಸ್ಪಷ್ಟನೆ ಕೊಡಿ  ಎಂದು ಮನವಿ ಮಾಡಿದರು. ವಿಚಾರಣೆಯನ್ನ ಹೈಕೋರ್ಟ್ ತ್ರಿಸದಸ್ಯ ಪೀಠ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿತು.