ಮನೆ ಆರೋಗ್ಯ ಕೊರೊನಾ: ದೇಶದಲ್ಲಿಂದು 1.27 ಲಕ್ಷ ಹೊಸ ಕೇಸ್ ಪತ್ತೆ

ಕೊರೊನಾ: ದೇಶದಲ್ಲಿಂದು 1.27 ಲಕ್ಷ ಹೊಸ ಕೇಸ್ ಪತ್ತೆ

0

ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಾ ಸಾಗುತ್ತಿದ್ದು,  ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1,27,952 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, 1059 ಮಂದಿ ಸಾವಿಗೀಡಾಗಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,20,80,664ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,01,114ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,31,648ಕ್ಕೆ ತಲುಪಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 2,30,814 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 40,24,7,902ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 16,11,666 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 73,58,04,280 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ. ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,68,98,17,199 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಹಿಂದಿನ ಲೇಖನಪ್ರೇಮಿಗಳ ದಿನದಂದು ನಿಮ್ಮ ರಾಶಿ ಭವಿಷ್ಯ
ಮುಂದಿನ ಲೇಖನಹಿಜಾಬ್​ ವಿವಾದ: ಮೈಸೂರಿನಲ್ಲಿ ‘ಐ ಲವ್​ ಹಿಜಾಬ್‘​ ಅಭಿಯಾನ