ಮನೆ ಆರೋಗ್ಯ ಕೊರೋನಾ: ದೇಶದಲ್ಲಿಂದು 1.49 ಲಕ್ಷ ಹೊಸ ಕೇಸ್ ಪತ್ತೆ

ಕೊರೋನಾ: ದೇಶದಲ್ಲಿಂದು 1.49 ಲಕ್ಷ ಹೊಸ ಕೇಸ್ ಪತ್ತೆ

0

ನವದೆಹಲಿ: ದೇಶದಲ್ಲಿಂದು ಕೊರೊನಾ ಪ್ರಕರಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ ಹೊಸದಾಗಿ 1,49,394 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 1072 ಮಂದಿ ಸಾವಿಗೀಡಾಗಿದ್ದಾರೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,19,52,712ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,00,055ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,35,569ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 2,46,674 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,00,17,088ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 16,11,666 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 73,58,04,280 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,68,47,16,068 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಹಿಂದಿನ ಲೇಖನಗಲ್ವಾನ್ ಕಣಿವೆ ಸಂಘರ್ಷದಲ್ಲಿ ವರದಿಯಾಗಿದ್ದಕ್ಕಿಂತಲೂ  ಚೀನಾ ಸೇನೆಗೆ ಹೆಚ್ಚು ಹಾನಿ
ಮುಂದಿನ ಲೇಖನಇ.ಡಿ ಅಧಿಕಾರಿಗಳಿಂದ ಪಂಜಾಬ್ ಸಿಎಂ ಸೋದರಳಿಯ ಬಂಧನ