ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ, ಹೊಸದಾಗಿ 1,67,059 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 1,192 ಮಂದಿ ಸಾವಿಗೀಡಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,14,69,499ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,96,242ಕ್ಕೆ ಏರಿಕೆಯಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 17,43,059ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,67,059 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,91,43,181ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 13,31,198 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 72,89,97,813 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,66,68,48,204 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.