ಮನೆ ಆರೋಗ್ಯ ಕೋವಿಡ್-19: ದೇಶದಲ್ಲಿ 1,72,433 ಹೊಸ ಪ್ರಕರಣ

ಕೋವಿಡ್-19: ದೇಶದಲ್ಲಿ 1,72,433 ಹೊಸ ಪ್ರಕರಣ

0

ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಲೆ ಹೆಚ್ಚುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 1,72,433 ಹೊಸ ಪ್ರಕರಣಗಳು ವರದಿಯಾಗಿದ್ದು, 1,008 ಮಂದಿ ಮೃತಪಟ್ಟಿದ್ದಾರೆ. ಮತ್ತು 2,59,107 ಮಂದಿ ಗುಣಮುಖರಾಗಿದ್ದಾರೆ.

ಇದುವರೆಗೆ ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 4,98, 983 ಆಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್ ಸೋಂಕಿತರ ಸಂಖ್ಯೆ 15,33,921 ಆಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಪ್ರತಿದಿನ ದೇಶದಲ್ಲಿ ಕೋವಿಡ್ ಪಾಸಿಟಿವ್ ಸೋಂಕಿತರ ದರ ಶೇಕಡಾ 10.99ರಷ್ಟು ಇದೆ. ಇನ್ನು ಭಾರತದಲ್ಲಿ ನಿನ್ನೆ ಒಂದೇ 15,69,449 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ 73,41,92,614 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ದೇಶದಲ್ಲಿ ಇದುವರೆಗೆ 167.87 ಕೋಟಿ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

ಹಿಂದಿನ ಲೇಖನಪ್ರಗತಿಯ ದೂರದೃಷ್ಟಿಯುಳ್ಳ ಬಜೆಟ್: ಸಚಿವ ಸಿ.ಸಿ.ಪಾಟೀಲ್
ಮುಂದಿನ ಲೇಖನಫೆ.7 ರಂದು ಸಿಎಂ ದೆಹಲಿಗೆ: ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ