ನವದೆಹಲಿ: ದೇಶದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,99,054 ಹೊಸ ಪ್ರಕರಣಗಳು ಪತ್ತೆಯಾಗಿದೆ. ಇದೇ ಅವಧಿಯಲ್ಲಿ 895 ಮಂದಿ ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,22,72,014ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,02,874ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 11,08,938ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,99,054 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,06,60,202ಕ್ಕೆ ತಲುಪಿದೆ.
ಇನ್ನು ಭಾರತದಲ್ಲಿ ಒಂದೇ 11,56,363 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 74,15,61,587 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.
ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,69,63,80,755ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.