ಮಂಡ್ಯ:ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿ ರುವುದರಿಂದ ಕೆ.ಆರ್.ಎಸ್ ಜಲಾಶಯದಿಂದ ಈಗಾಗಲೇ 70,000 ಕ್ಯೂಸೆಕ್ಸ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿತ್ತು, ಮಳೆ ಹೆಚ್ಚಾಗಿರುವುದರಿಂದ ಸುಮಾರು 1,00,000 ದಿಂದ 1,50,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು.
ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿನ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ಹಾಗೂ ರೈತರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಲು ಜಿಲ್ಲಾಧಿಕಾರಿ ಡಾ.ಕುಮಾರ ಅವರು ಮನವಿ ಮಾಡಿದ್ದಾರೆ.
Saval TV on YouTube