ಮನೆ ಕಾನೂನು ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭದಾಸೆ ತೋರಿಸಿ ಮಹಿಳೆಗೆ 10.45 ಕೋಟಿ ವಂಚನೆ

ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭದಾಸೆ ತೋರಿಸಿ ಮಹಿಳೆಗೆ 10.45 ಕೋಟಿ ವಂಚನೆ

0

ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಅಧಿಕ ಲಾಭಾಂಶದ ಆಸೆಗೆ ಬಿದ್ದು ಮಹಿಳೆಯೊಬ್ಬರು 10.45 ಕೋಟಿ ರೂ. ಹಣ ಕಳೆದುಕೊಂಡಿರುವ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದಾವಣಗೆರೆಯ ವಿಜಯಲಕ್ಷ್ಮಿ ಎಂಬವರು ವಂಚನೆಗೊಳಗಾದವರು.

Join Our Whatsapp Group

ಷೇರು ಕಂಪನಿಯೊಂದರಲ್ಲಿ ಆನ್‌ಲೈನ್‌ ಮೂಲಕ ಹಂತ ಹಂತವಾಗಿ 10,45,50,000 ರೂ. ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಂದ ಹೂಡಿಕೆ ಮಾಡಿದ್ದೆ. ಲಾಭಾಂಶ ತೋರಿಸಿದ ಹಣವನ್ನು ವಿತ್​ ಡ್ರಾ ಮಾಡಲು ಯತ್ನಿಸಿದಾಗ ಹಣ ವಿತ್ ಡ್ರಾ ಆಗಲಿಲ್ಲ. ಈ ಸಂದರ್ಭದಲ್ಲಿ ನಾನು ಮೋಸ ಹೋಗಿರುವುದು ಗೊತ್ತಾಯಿತು.‌ ಕಂಪನಿಯನ್ನು ಹುಡುಕಿಕೊಂಡು ಮುಂಬೈಗೆ ತೆರಳಿದ್ದೆ. ಅದೂ ಕೂಡ ಪ್ರಯೋಜನ‌ವಾಗಲಿಲ್ಲ ಎಂದು ದೂರಿನಲ್ಲಿ ವಿಜಯಲಕ್ಷ್ಮಿ ತಿಳಿಸಿದ್ದಾರೆ. ದಾವಣಗೆರೆಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಅವರು ದೂರು ದಾಖಲಿಸಿದ್ದಾರೆ.

ಹೂಡಿಕೆ 10.45 ಕೋಟಿ, ಲಾಭಾಂಶ ತೋರಿಸಿದ್ದು 23 ಕೋಟಿ: ವಿಜಯಲಕ್ಷ್ಮಿ ಅವರು 10.45 ಕೋಟಿ ಹಣ ಹೂಡಿಕೆ ಮಾಡಿದ್ದು, ಷೇರು ಮಾರುಕಟ್ಟೆಯ ಖಾತೆಯಲ್ಲಿ 23 ಕೋಟಿ ರೂಪಾಯಿ ಎಂದು ತೋರಿಸುತ್ತಿತ್ತು. ಹೂಡಿಕೆಯೊಂದಿಗೆ ಹೆಚ್ಚುವರಿಯಾಗಿ ಬಂದ ಹಣವೂ ಸೇರಿದಂತೆ ಎಲ್ಲ ಹಣವನ್ನು ಬಿಡಿಸಿಕೊಳ್ಳಲು ಮುಂದಾದಾಗ ಕಂಪನಿಯವರು ಅರ್ಧಕ್ಕೆ ಹಣವನ್ನು ಡ್ರಾ ಮಾಡಿಕೊಳ್ಳಲು ಬರುವುದಿಲ್ಲ, ಮತ್ತಷ್ಟು ಹಣ ಹೂಡಿಕೆ ಮಾಡುವಂತೆ ಮನವೊಲಿಸಲು ಪ್ರಯತ್ನಿಸಿದ್ದಾರೆ. ಹಣ ಡ್ರಾ ಮಾಡಲು ಆಯ್ಕೆಯೇ ನೀಡದಿದ್ದಾಗ ವಂಚನೆಗೊಳಗಾಗಿರುವ ಬಗ್ಗೆ ತಿಳಿದು ಬಂದಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.