Saval TV on YouTube
ಬೆಂಗಳೂರು(Bengaluru): ವಿಧಾನಸೌಧದಲ್ಲಿ ಅನಧಿಕೃತವಾಗಿ 10.5 ಲಕ್ಷ ರೂ. ಹಣ ಪತ್ತೆಯಾಗಿದ್ದು, ಹಣ ಹೊಂದಿದ್ದ ಸಹಾಯಕ ಇಂಜಿನಿಯರ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಂಡ್ಯ ಮೂಲದ ಸಹಾಯಕ ಇಂಜಿನಿಯರ್ ಜಗದೀಶ್ ಸಿಕ್ಕಿ ಬಿದ್ದ ಅಧಿಕಾರಿ.
ಬುಧವಾರ ಸಂಜೆ 7 ಗಂಟೆಗೆ ವಿಧಾನಸೌಧದ ಪಶ್ಚಿಮ ದ್ವಾರದ ಮೂಲಕ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಜಗದೀಶ್ ಅನಧಿಕೃತವಾಗಿ ಹಣ ಸಾಗಾಟ ಮಾಡುತ್ತಿದ್ದರು.
ಗೇಟ್’ನಲ್ಲಿ ಪೊಲೀಸರು ಪರಿಶೀಲನೆ ಮಾಡಿದ ಸಂದರ್ಭದಲ್ಲಿ ಜಗದೀಶ್ ಬ್ಯಾಗ್’ನಲ್ಲಿ ದೊಡ್ಡ ಮೊತ್ತದ ಹಣ ಇರುವುದು ಪತ್ತೆಯಾಗಿದೆ. ಆದರೆ ಹಣದ ಮೂಲದ ಕುರಿತಾಗಿ ಪೊಲೀಸರು ಪ್ರಶ್ನಿಸಿದಾಗ ಯಾವುದೇ ಸ್ಪಷ್ಟವಾದ ಮಾಹಿತಿಯನ್ನು ಈ ವ್ಯಕ್ತಿ ನೀಡಿಲ್ಲ.
ಈ ಹಿನ್ನೆಲೆಯಲ್ಲಿ ಹಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಎಫ್’ಐಆರ್ ಕೂಡಾ ದಾಖಲಾಗಿದೆ.