ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಜಾರಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ, ಸಿಎಂ ಅನ್ನ ಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಸೇರಿ ತಲಾ 10 ಕೆಜಿ ಆಹಾರ ಧಾನ್ಯ ಪೂರೈಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಹಿಂದೆ ಇದ್ದ ಬಿಜೆಪಿ ಸರ್ಕಾರ 7 ಕೆಜಿ ಅಕ್ಕಿ ಕೊಡುವ ಕಡೆ 5 ಕೆಜಿ ಕೊಡುತ್ತಿತ್ತು. ಚುನಾವಣೆ ಸಂದರ್ಭದಲ್ಲಿ ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಕೊಡುವುದಾಗಿ ಭರವಸೆ ನೀಡಿದ್ದೆವು. ಅಕ್ಕಿ ಸಂಗ್ರಹ ಇಲ್ಲದ ಕಾರಣ ಜುಲೈ 1ರಿಂದ ಅನ್ನ ಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಸೇರಿ ತಲಾ 10 ಕೆಜಿ ಆಹಾರ ಧಾನ್ಯ ವಿತರಿಸಲಾಗುವುದು.
ರೇಷನ್ ಕಾರ್ಡ್ ಹೊಂದಿರುವ ಪ್ರತಿ ಕುಟುಂಬಳಿಗೆ ತಲಾ 10 ಕೆಜಿ ಉಚಿತ ಅಕ್ಕಿ ಕೊಡುತ್ತೇವೆ ಎಂದು ಸಚಿವ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಕುರಿತು ಘೋಷಣೆ ಮಾಡಿದ್ದಾರೆ.














