ಮನೆ ಕಾನೂನು ಕಾನೂನು ಪದವೀಧರರಿಗೆ ಮಾಸಿಕ 10 ಸಾವಿರ ಸ್ಟೇಫಂಡ್: ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

ಕಾನೂನು ಪದವೀಧರರಿಗೆ ಮಾಸಿಕ 10 ಸಾವಿರ ಸ್ಟೇಫಂಡ್: ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

0

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿರುವ ಕಾನೂನು ಪದವೀಧರರಿಗೆ ಲಾ ಪ್ರಾಕ್ಟೀಸ್ ಮಾಡಲು ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಅರ್ಜಿಗಳನ್ನು ಆಹ್ವಾನಿಸಿದೆ.

Join Our Whatsapp Group

ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಸಮಾಜ ಕಲ್ಯಾಣ ಇಲಾಖೆಯು, ಆಯ್ಕೆಯಾದ ಅರ್ಹ ಕಾನೂನು ಪದವೀಧರರಿಗೆ ಎರಡು ವರ್ಷಗಳ ಕಾಲ ಮಾಸಿಕ 10 ಸಾವಿರ ರೂ. ಶಿಷ್ಯವೇತನ ಪಾವತಿಸಲಾಗುತ್ತದೆ ಎಂದು ತಿಳಿಸಿದೆ.

ಅರ್ಹ ಕಾನೂನು ಪದವೀಧರರು ಜುಲೈ 17ರ ಒಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲಾಖೆಯ ವೆಬ್ ಸೈಟ್ www.sw.kar.nic.in ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ.

ಮಾನದಂಡವೇನು ?

  • ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕಾನೂನು ಪದವಿಯನ್ನು ಪಡೆದು 2 ವರ್ಷ ಮೀರಿರಬಾರದು.
  • ತರಬೇತಿಯನ್ನು ಆಯಾ ಜಿಲ್ಲೆಯಲ್ಲೇ ಪಡೆಯಬೇಕು.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು 40 ವರ್ಷ ಮೀರಿರಬಾರದು.
  • ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ 20 ವರ್ಷಗಳ ಕಾಲ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿ ಪಡೆಯುವ ಕುರಿತು ಲಿಖಿತವಾಗಿ ತಿಳಿಸಬೇಕು.
  • ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ 10 ಸಾವಿರ ಶಿಷ್ಯವೇತನ ಪಾವತಿಸಲಾಗುವುದು.
  • ಅಯ್ಕೆಯಾದ ಅಭ್ಯರ್ಥಿಗಳು ಮಧ್ಯದಲ್ಲಿ ಬಿಡುವುದಿಲ್ಲ ಎಂದು, ಒಂದು ವೇಳೆ ಬಿಟ್ಟರೆ ತರಬೇತಿ ಅವಧಿಯಲ್ಲಿ ಪಡೆದಿರುವ ಶಿಷ್ಯ ವೇತನವನ್ನು ಶೇ.10 ರಷ್ಟು ಬಡ್ಡಿಯೊಂದಿಗೆ ಸರ್ಕಾರಕ್ಕೆ ಮರುಪಾವತಿ ಮಾಡುವುದಾಗಿ ಮುಚ್ಚಳಿಕೆ ಬರೆದುಕೊಡಬೇಕು.
  • ಈ ನಿಯಮ ರಾಜ್ಯ/ಕೇಂದ್ರ ಸರ್ಕಾರದಲ್ಲಿ ನೌಕರಿ ಪಡೆದರೆ ಅನ್ವಯಿಸುವುದಿಲ್ಲ.
  • ಸುಳ್ಳು ಮಾಹಿತಿ/ದಾಖಲೆ ನೀಡಿ ಆಯ್ಕೆಯಾದಲ್ಲಿ ಶಿಷ್ಯವೇತನವನ್ನು ಶೇ.10 ರಷ್ಟು ಬಡ್ಡಿಯೊಂದಿಗೆ ಸರ್ಕಾರಕ್ಕೆ ಹಿಂತಿರುಗಿಸಬೇಕು.
  • ತಪ್ಪಿದರೆ ಭೂ ಕಂದಾಯ ಬಾಕಿ ವಸೂಲಿಯಂತೆ ವಸೂಲಿ ಮಾಡಬೇಕಾಗುತ್ತದೆ.
ಹಿಂದಿನ ಲೇಖನಮೈಸೂರು: “ಚಿಗುರು ಆಶ್ರಮ”ದ ಎರಡನೆ ಶಾಖೆ ಉದ್ಘಾಟನೆ
ಮುಂದಿನ ಲೇಖನಸೋಮವಾರದಿಂದ ‘ಶಕ್ತಿ’ ಸ್ಮಾರ್ಟ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ