ಮನೆ ರಾಜಕೀಯ ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ: ಸಿಎಂ ಸಿದ್ದರಾಮಯ್ಯ

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ: ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೂಡ ಕೈಜೋಡಿಸಿದೆ. ಸಂತ್ರಸ್ತರಿಗೆ 100 ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ ಶನಿವಾರ ಘೋಷಿಸಿದ್ದಾರೆ.

Join Our Whatsapp Group

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಅವರು ಸಂದೇಶ ಪ್ರಕಟಿಸಿದ್ದಾರೆ.

ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತಕ್ಕೆ ಸಂಬಂಧಿಸಿ ಕರ್ನಾಟಕವು ಕೇರಳದೊಂದಿಗೆ ಒಗ್ಗಟ್ಟಿನಿಂದ ಇರಲಿದೆ. ನಾನು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರಿಗೆ ನಮ್ಮ ಬೆಂಬಲದ ಭರವಸೆ ನೀಡಿದ್ದೇನೆ. ಸಂತ್ರಸ್ತರಿಗೆ ಕರ್ನಾಟಕ 100 ಮನೆಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದೇನೆ. ಒಗ್ಗಟ್ಟಿನಿಂದ ನಾವು ಪುನರ್​ರ್ನಿರ್ಮಾಣ ಮಾಡುತ್ತೇವೆ ಮತ್ತು ಭರವಸೆಯನ್ನು ಪುನಃಸ್ಥಾಪಿಸುತ್ತೇವೆ ಎಂದು ಎಕ್ಸ್​​ ಸಂದೇಶದಲ್ಲಿ ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

ಈ ಮಧ್ಯೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಮನೆಗಳ ಭರವಸೆ ನೀಡಿದ್ದಾರೆ. ಅವರಿಗೆ ನೇರವಾಗಿ ಕರೆ ಮಾಡಿ ಧನ್ಯವಾದ ಸಲ್ಲಿಸಿರುವುದಾಗಿ ಪಿಣರಾಯಿ ವಿಜಯನ್ ಕಚೇರಿ ತಿಳಿಸಿದೆ.

ಆರಂಭದಲ್ಲಿಯೇ ವಯನಾಡು ದುರಂತಕ್ಕೆ ಸಿದ್ದರಾಮಯ್ಯ ಸ್ಪಂದಿಸಿದ್ದರು. ದೂರವಾಣಿ ಕರೆ ಮೂಲಕ ಪಿಣರಾಯಿ ವಿಜಯನ್​ಗೆ ನೆರವಿನ ಭರವಸೆ ನೀಡಿದ್ದರು.

ಈ ಮಧ್ಯೆ, ಕಸ್ತೂರಿ ರಂಗನ್ ವರದಿ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ಸರ್ಕಾರದ ನಿಲುವಾಗಿದೆ. ಆದರೆ, ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹಾನಿಗೀಡಾದ ಪ್ರದೇಶಗಳಿಗೆ ಶುಕ್ರವಾರ ಭೇಟಿನೀಡಿ, ಸಂತ್ರಸ್ತರ ಅಹವಾಲು ಆಲಿಸಿದ್ದೇನೆ. ಈ ವೇಳೆ ರಸ್ತೆ ಮತ್ತು ಮನೆಗಳ ದುರಸ್ತಿ, ಬೆಳೆ ಹಾನಿ ಬಗ್ಗೆ ಕಾಫಿ ಬೋರ್ಡ್ ಹಾಗೂ ಕಂದಾಯ ಇಲಾಖೆ ಜಂಟಿಯಾಗಿ ಸಮೀಕ್ಷೆ ನಡೆಸಬೇಕು ಎಂಬ ಸೂಚನೆ ನೀಡಿದ್ದೇನೆ. ಇದರ ಜೊತೆಗೆ ಜಿಲ್ಲೆಯ ಪ್ರವಾಹ ಸಂತ್ರಸ್ತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ತಿಳಿಸಿದ್ದಾರೆ.