ಮನೆ ಶಿಕ್ಷಣ ಸರ್ಕಾರಿ ಶಾಲೆಗಳಲ್ಲಿ 100 ರೂ . ದೇಣಿಗೆ ಸಂಗ್ರಹ:  ಆದೇಶ ಹಿಂಪಡೆದ ಶಿಕ್ಷಣ ಇಲಾಖೆ

ಸರ್ಕಾರಿ ಶಾಲೆಗಳಲ್ಲಿ 100 ರೂ . ದೇಣಿಗೆ ಸಂಗ್ರಹ:  ಆದೇಶ ಹಿಂಪಡೆದ ಶಿಕ್ಷಣ ಇಲಾಖೆ

0

ಬೆಂಗಳೂರು(Bengaluru): ಸರ್ಕಾರಿ ಶಾಲೆಗಳ ಖರ್ಚು-ವೆಚ್ಚ ನಿರ್ವಹಣೆಗೆ ಮಾಸಿಕ ವಿದ್ಯಾರ್ಥಿಗಳ ಪೋಷಕರಿಂದ 100 ರೂಪಾಯಿ ದೇಣಿಗೆ ರೂಪದಲ್ಲಿ ಪಡೆಯಲು ಅವಕಾಶ ನೀಡಿ ಹೊರಡಿಸಿದ್ಧ ಆದೇಶವನ್ನು ಶಿಕ್ಷಣ ಇಲಾಖೆ ಹಿಂಪಡೆದಿದೆ.

ಶಿಕ್ಷಣ ಇಲಾಖೆಯ ಈ ಸುತ್ತೋಲೆಗೆ ಸಾಕಷ್ಟು ಆಕ್ಷೇಪ ವಿರೋಧಗಳು ವ್ಯಕ್ತವಾದ ಬಳಿಕ ಎಚ್ಚೆತ್ತ ಶಿಕ್ಷಣ ಇಲಾಖೆ, ಶಾಲಾ ಮಕ್ಕಳ ಪೋಷಕರಿಂದ 100 ರೂ ದೇಣಿಗೆ ಸಂಗ್ರಹ ಸುತ್ತೋಲೆಯನ್ನು ವಾಪಸ್ ಪಡೆದಿದೆ.

ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಅಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯು ಶಾಲೆಯ ಅಭಿವೃದ್ಧಿಗಾಗಿ ದಾನ, ದೇಣಿಗೆಗಳನ್ನು ಸ್ವೀಕರಿಸುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿತ್ತು.

ಸರ್ಕಾರಿ ಶಾಲೆಗಳ ಶೌಚಾಲಯ, ವಿದ್ಯುತ್ ಬಿಲ್, ಕಡಿಯುವ ನೀರು ನಿರ್ವಹಣೆಗೆ ಮಾಸಿಕ ವಿದ್ಯಾರ್ಥಿಗಳ ಪೋಷಕರಿಂದ 100 ರೂಪಾಯಿ ದೇಣಿಗೆ ರೂಪದಲ್ಲಿ ಪಡೆಯಲು ಎಸ್’ಡಿ’ಎಂಸಿಗೆ ಅವಕಾಶ ನೀಡಿ  ಆದೇಶಿಸಿತ್ತು.

ಸರ್ಕಾರದ ನಿರ್ಧಾರಕ್ಕೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸೇರಿದಂತೆ ವಿವಿಧ ಸಂಘಟನೆಗಳು, ಶಿಕ್ಷಣ ತಜ್ಞರು ರಾಜ್ಯದಾದ್ಯಂತ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ದೇಣಿಗೆ ನೀಡುವುದು ಸ್ವಚ್ಛಯೆಯಿಂದ ಎಂದು ಹೇಳಿದ್ದರೂ ಈ ಸುತ್ತೋಲೆಯಿಂದ ಪೋಷಕರ ಮಧ್ಯೆ ತಾರತಮ್ಯಕ್ಕೆ ಕಾರಣವಾಗುತ್ತದೆ. ಸರ್ಕಾರಿ ಶಾಲೆಗೆ ಈಗ ಬರುತ್ತಿರುವ ಮಕ್ಕಳೂ ಬರದೆ ಶಾಲೆ ಮುಚ್ಚುವ ಸ್ಥಿತಿ ನಿರ್ಮಾಣವಾಗಬಹುದು. ಸಂವಿಧಾನದ ಮೂಲಭೂತ ಹಕ್ಕು, ಕಡ್ಡಾಯ ಶಿಕಲ್ಷಣದ ಹಕ್ಕಿಗೆ ಚ್ಯುತಿ ತರುತ್ತದೆ. ಸರ್ಕಾರ ಇತರೆ ಯೋಜನೆಗಳಿಗೆ ಬೇಕಾಬಿಟ್ಟಿ ಹಣ ಖರ್ಚು ಮಾಡುತ್ತದೆ. ಶಿಕ್ಷಣ, ಆರೋಗ್ಯ ಕ್ಷೇತ್ರ ಕಡೆಗಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ … ಸರ್ಕಾರಿ ಶಾಲೆಗಳ ಖರ್ಚು ವೆಚ್ಚದ ಹೊಣೆ ಪೋಷಕರ ಹೆಗಲಿಗೆ: ತಿಂಗಳಿಗೆ 100 ದೇಣಿಗೆ

ಇದನ್ನೂ ಓದಿ …ರಾಜ್ಯ ಬಿಜೆಪಿಗೆ ಸರ್ಕಾರಿ ಶಾಲೆ ನಡೆಸುವ ಯೋಗ್ಯತೆ ಇಲ್ಲ: ಡಿ.ಕೆ ಶಿವಕುಮಾರ್‌

ಇದನ್ನೂ ಓದಿ …ಕನ್ನಡ ಶಾಲೆ ಮುಚ್ಚಲು ಹುನ್ನಾರ ನಡೆಯುತ್ತಿದೆ: ಎಚ್.ವಿಶ್ವನಾಥ್

ಇದನ್ನೂ ಓದಿ … ಸರ್ಕಾರಿ ಶಾಲೆಗಳಲ್ಲಿ ದೇಣಿಗೆ ಸಂಗ್ರಹ: ನನ್ನದಾಗಲಿ, ಮುಖ್ಯಮಂತ್ರಿಯದ್ದಾಗಲಿ ಪಾತ್ರವಿಲ್ಲ ಎಂದ ಬಿ.ಸಿ.ನಾಗೇಶ್

ಹಿಂದಿನ ಲೇಖನಡಾಲಿಯ ‘ಹೆಡ್ ಬುಷ್’ ಸಿನಿಮಾದ ಮೊದಲ ದಿನದ ಕಲೆಕ್ಷನ್ ಎಷ್ಟು? ಇಲ್ಲಿದೆ ಮಾಹಿತಿ
ಮುಂದಿನ ಲೇಖನಕಳೆದ 9 ವರ್ಷಗಳಿಂದ ಟ್ರೋಫಿ ಗೆದ್ದಿಲ್ಲ ಎಂಬುದು ಆಟಗಾರರ ತಲೆಯಲ್ಲಿದೆ: ರೋಹಿತ್ ಶರ್ಮಾ