ಬೆಂಗಳೂರು (Bengaluru)- ರಾಜ್ಯದಲ್ಲಿ ಭಾನುವಾರ 104 ಹೊಸ ಕೋವಿಡ್ (Covid) ಪ್ರಕರಣಗಳು ವರದಿಯಾಗಿವೆ. ಇದರಿಂದ ಸೋಂಕಿತರ ಸಂಖ್ಯೆ 39,47,726 ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದು, ಒಟ್ಟಾರೆ ಮೃತರ ಸಂಖ್ಯೆ 40,060ಕ್ಕೆ ತಲುಪಿದೆ. ಇನ್ನು 108 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 39,05,844 ಆಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,780 ಇದೆ.
ಬೆಂಗಳೂರು ನಗರದಲ್ಲಿ 93, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡದಲ್ಲಿ ತಲಾ 2, ವಿಜಯಪುರ 3, ತುಮಕೂರು, ಉಡುಪಿ, ಉತ್ತರ ಕನ್ನಡ, ಬೀದರ್ ನಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣಗಳು ವರದಿಯಾಗಿವೆ.
ಮೈಸೂರು ಜಿಲ್ಲೆಯ ಕೋವಿಡ್ ವಿವರ:
ಮೈಸೂರು ಜಿಲ್ಲೆಯಲ್ಲಿ ನಿನ್ನೆ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. ಆದರೆ ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಇದರಿಂದ ಮೃತರ ಸಂಖ್ಯೆ 2,559ಕ್ಕೆ ತಲುಪಿದೆ. ಮೈಸೂರಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2,29,477 ಆಗಿದೆ. ಇದುವರೆಗೂ 2,26,916 ಮಂದಿ ಗುಣಮುಖರಾಗಿದ್ದು, 2 ಸಕ್ರಿಯ ಪ್ರಕರಣಗಳಿವೆ.