ಮನೆ ರಾಜ್ಯ ರಾಜ್ಯದಲ್ಲಿ 1,046 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 1,046 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,046 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,69,411ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40073ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

857 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,23,398ಕ್ಕೆ ಏರಿಕೆಯಾಗಿದೆ. ಇನ್ನು 5,896 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 984 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,04,091ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನದೇವರ ನಾಮದೊಂದಿಗೆ ನಿಮ್ಮ ದಿನ ಪ್ರಾರಂಭಿಸಿ
ಮುಂದಿನ ಲೇಖನಉತ್ತಮ ಆರೋಗ್ಯಕ್ಕೆ ಯೋಗ ಬೆಸ್ಟ್:‌ ಯೋಗದ ಪ್ರಯೋಜನದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ