ಬೆಂಗಳೂರು (Bengaluru)- ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 109 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,49,882ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40063 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
147 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,07975ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ 1802 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 95 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,85,638ಕ್ಕೆ ಏರಿಕೆಯಾಗಿದೆ.