ಮನೆ ರಾಜ್ಯ ರಾಜ್ಯದಲ್ಲಿ 1127 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ 1127 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1127 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,75,000ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40080 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1044 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,28,397ಕ್ಕೆ ಏರಿಕೆಯಾಗಿದೆ. ಇನ್ನು 6481 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 1053 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,09,240ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನಮಂತ್ರ ಪಠಿಸಿ ರಾಘವೇಂದ್ರ ಸ್ವಾಮಿಯ ಕೃಪೆಗೆ ಪಾತ್ರರಾಗಿ
ಮುಂದಿನ ಲೇಖನಸೂರ್ಯ ನಮಸ್ಕಾರ ಮಾಡಲು ಯಾವ ಸಮಯ ಉತ್ತಮ, ಪಾಲಿಸಬೇಕಾದ ಕ್ರಮಗಳು