ಮನೆ ರಾಜ್ಯ ರಾಜ್ಯದಲ್ಲಿ 1151 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ 1151 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್‌ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಯಲ್ಲಿ 1,151 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,88,579ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಸಾವಿನ ಸಂಖ್ಯೆ 40,089ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1214 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,40,831ಕ್ಕೆ ಏರಿಕೆಯಾಗಿದೆ. ಇನ್ನು 7,617 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 1013 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,21,451ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನಗಣೇಶ ಸ್ತೋತ್ರ
ಮುಂದಿನ ಲೇಖನಡೆಂಬಲ್ಸ್ ವ್ಯಾಯಾಮದ ಉಪಯೋಗಗಳು