ಮನೆ ರಾಜ್ಯ ರಾಜ್ಯದಲ್ಲಿ 1,191 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 1,191 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,191 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,47,296ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,185ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 2,032 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,99,213ಕ್ಕೆ ಏರಿಕೆಯಾಗಿದೆ. ಇನ್ನು 7,856 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 668 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,62,146ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನ​ಸಾಡೇಸಾತಿ ಶನಿ ಮಂತ್ರ
ಮುಂದಿನ ಲೇಖನವ್ಯಾಯಾಮ: ಪಾರ್ಕ್‌, ಜಿಮ್‌ ಯಾವುದು ಉತ್ತಮ?