ಮನೆ ಅಪರಾಧ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ; 12 ಆರೋಪಿಗಳು  ವಶಕ್ಕೆ

ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ; 12 ಆರೋಪಿಗಳು  ವಶಕ್ಕೆ

0

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣದಲ್ಲಿ ಭಾಗಿಯಾದ  ಒಟ್ಟು 12 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದಲ್ಲಿ ಕೊಲೆ ನಡೆದ 24 ಗಂಟೆಗಳಲ್ಲಿ ಪ್ರಕರಣ ಭೇದಿಸಲಾಗಿದ್ದು, ಹರ್ಷನ ಹತ್ಯೆಯಲ್ಲಿ ಭಾಗಿಯಾಗಿದ್ದ ಎಲ್ಲ 12 ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಅವರಲ್ಲಿ ಮೂವರನ್ನು  ಬೆಂಗಳೂರಿನಲ್ಲಿ ಬಂಧಿಸಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.

ಸೋಮವಾರ ಶಿವಮೊಗ್ಗದ ಜೆ.ಪಿ. ನಗರ ನಿವಾಸಿ ಸೈಯದ್ ನದೀಮ್(20) ಮತ್ತು ಶಿವಮೊಗ್ಗದ ಬುದ್ಧಾನಗರ ನಿವಾಸಿ ಕಾಸಿಫ್ (30) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ರೈಲು ಮೂಲಕ ಪರಾರಿಯಾಗಿದ್ದ ಇತರೆ ಮೂವರು ಆರೋಪಿಗಳನ್ನು ಇಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿನ್ನೆ ಬಂಧಿಸಿದ್ದ ಆರೋಪಿಯು ಹಳೆಯ ವೈಷ್ಯಮದ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿದ್ದು, ಐದು ಮಂದಿ ಮಚ್ಚು ಲಾಂಗುಗಳಿಂದ ಹರ್ಷನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದನು. ಆರೋಪಿಗಳು ಹಲವು ದಿನಗಳಿಂದ ಹರ್ಷನ ಚಲನವಲನ ಗಮನಿಸುತ್ತಿದ್ದರು. ಹರ್ಷ ಒಂಟಿಯಾಗಿ ಸಿಕ್ಕಾಗ ಇರಿದು ಕೊಲೆ ಮಾಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಸಿಕ್ಕಿದೆ. ಘಟನೆ ನಡೆದ ಭಾನುವಾರ ಬೆಳಗ್ಗೆಯಿಂದಲೇ ಹರ್ಷನನ್ನು ಓರ್ವ ಹಿಂಬಾಲಿಸುತ್ತಿದ್ದ. ಹರ್ಷ ಚಲನವಲನಗಳ ಮೇಲೆ ಬೆಳಗ್ಗೆಯಿಂದಲೇ ನಿಗಾ ಇಟ್ಟಿದ್ದರು ಎಂದು ಪೊಲೀಸ್ ಮೂಲಗಳು ಹೇಳಿವೆ. ಹರ್ಷನ ಕೊಲೆಗೆ 3 ದಿನಗಳಿಂದ ಸ್ಕೆಚ್ ಹಾಕಿದ್ದ 7 ಆರೋಪಿಗಳು ಹತ್ಯೆಗೈದು, ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದರು.

ಪೊಲೀಸ್ ಸರ್ಕಲ್ ಇನ್ಸ್ಪೆಕ್ಟರ್ಗಳಾದ ಅಭಯ್ ಪ್ರಕಾಶ್, ಗುರುರಾಜ್ ಮತ್ತು ಸತೀಶ್ ತಂಡದಿಂದ 7 ಆರೋಪಿಗಳ ಬಂಧನವಾಗಿದೆ ಎಂದು ತಿಳಿದುಬಂದಿದೆ.

ಏನಿದು ಘಟನೆ? :

ಭಾನುವಾರ ರಾತ್ರಿ 30ರ ಸಮಯದಲ್ಲಿ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುವ ರಸ್ತೆ ಪಕ್ಕದ ಬಡಾವಣೆಯಲ್ಲಿ ಕಾರಿನಲ್ಲಿ ಬಂದಿದ್ದ 4ರಿಂದ 6 ಜನರ ಗುಂಪು, ಬಜರಂಗದಳ ಕಾರ್ಯಕರ್ತ ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದ ಹರ್ಷನನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ.

ನಗರದಲ್ಲಿ ಬಿಗುವಿನ ವಾತಾವರಣ ಇರುವ ಹಿನ್ನೆಲೆಯಲ್ಲಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಫೆ.23ರ ರಾತ್ರಿ 9 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಜನರು ಗುಂಪುಗೂಡಲು ಅವಕಾಶವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಹಿಂದಿನ ಲೇಖನಚಾಮರಾಜನಗರ: ರಸ್ತೆಯಲ್ಲಿ ಚಿರತೆ ಮೃತದೇಹ ಪತ್ತೆ: ವಾಹನ ಡಿಕ್ಕಿ ಸಾಧ್ಯತೆ
ಮುಂದಿನ ಲೇಖನದೇಶದಲ್ಲಿ 13,405 ಕೊರೊನಾ ಪ್ರಕರಣ ಪತ್ತೆ