ಮನೆ ರಾಷ್ಟ್ರೀಯ ದಕ್ಷಿಣ ಆಫ್ರಿಕಾದಿಂದ ಗ್ವಾಲಿಯರ್’ಗೆ ಬಂದ 12 ಚೀತಾಗಳು

ದಕ್ಷಿಣ ಆಫ್ರಿಕಾದಿಂದ ಗ್ವಾಲಿಯರ್’ಗೆ ಬಂದ 12 ಚೀತಾಗಳು

0

ಭೋಪಾಲ್: ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಶನಿವಾರ ಬೆಳಿಗ್ಗೆ ಮಧ್ಯಪ್ರದೇಶದ ಗ್ವಾಲಿಯರ್‌ಗೆ ತರಲಾಗಿದೆ.

7 ಗಂಡು ಮತ್ತು 5 ಹೆಣ್ಣು ಚೀತಾಗಳನ್ನು ಹೊತ್ತ ವಾಯುಪಡೆಯ ವಿಮಾನವು ಬೆಳಿಗ್ಗೆ 10 ಗಂಟೆ ಸುಮಾರಿಗೆ ಗ್ವಾಲಿಯರ್ ವಿಮಾನ ನಿಲ್ದಾಣದಲ್ಲಿ ಬಂದಿಳಿಯಿತು.

ಅವುಗಳನ್ನು ಮಧ್ಯಾಹ್ನ 12 ಗಂಟೆಗೆ ವಾಯುಪಡೆ ಹೆಲಿಕಾಪ್ಟರ್‌’ನಲ್ಲಿ ಚೀತಾಗಳನ್ನು ಗ್ವಾಲಿಯರ್‌ನಿಂದ ಶಿಯೊಪುರ್ ಜಿಲ್ಲೆಯ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಕೊಂಡೊಯ್ಯಲಾಗುತ್ತದೆ.

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಕೇಂದ್ರ ಸಚಿವ ಭೂಪೇಂದರ್ ಯಾದವ್ ಈ ಚೀತಾಗಳನ್ನು ನಿಯಮದಂತೆ ಕ್ವಾರಂಟೈನ್ ಪ್ರದೇಶಕ್ಕೆ ಬಿಡುಗಡೆ ಮಾಡಲಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ನಮೀಬಿಯಾದಿಂದ ತರಲಾಗಿದ್ದ 8 ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದಂದು ಉದ್ಯಾನಕ್ಕೆ ಬಿಡಲಾಗಿತ್ತು.

ಹಿಂದಿನ ಲೇಖನಗೌರಿ ಶಂಕರ್‌ ಆಯ್ಕೆ ಪ್ರಶ್ನೆ: ಸಂಜೆ 7.15ವರೆಗೂ ವಿಚಾರಣೆ;‌ ಆದೇಶ ಕಾಯ್ದಿರಿಸಿದ ಹೈಕೋರ್ಟ್‌
ಮುಂದಿನ ಲೇಖನಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ  ಹೆಣ್ಣಾನೆ ರಕ್ಷಣೆ: ಅಧಿಕಾರಿಗಳು, ಸಿಬ್ಬಂದಿ ಕಾರ್ಯಕ್ಕೆ ಮೋದಿ ಮೆಚ್ಚುಗೆ