Saval TV on YouTube
ನವದೆಹಲಿ(Newdelhi): ದಕ್ಷಿಣ ಆಫ್ರಿಕಾದಿಂದ 12 ಚೀತಾಗಳನ್ನು ಭಾರತಕ್ಕೆ ಕರೆ ತರಲು ಸಂಬಂಧಿಸಿದಂತೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.
ಕೇಂದ್ರ ಪರಿಸರ ಸಚಿವಾಲಯದ ಅಧಿಕಾರಿ ಈ ಕುರಿತು ಮಾಹಿತಿ ನೀಡಿದ್ದು, ಫೆಬ್ರುವರಿ 12ಕ್ಕೂ ಮುನ್ನ ಏಳು ಗಂಡು ಮತ್ತು ಐದು ಹೆಣ್ಣು ಚೀತಾಗಳನ್ನು ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಕರೆ ತರುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ.
ಕಳೆದ ಆರು ತಿಂಗಳಿಗೂ ಹೆಚ್ಚು ಸಮಯದಿಂದ ಕ್ವಾರಂಟೈನ್’ನಲ್ಲಿರುವ ಚೀತಾಗಳು, ಇದೇ ತಿಂಗಳಲ್ಲಿ ಭಾರತಕ್ಕೆ ತಲುಪುವ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿತ್ತು. ಆದರೆ ದಕ್ಷಿಣ ಆಫ್ರಿಕಾದಲ್ಲಿ ಪ್ರಕ್ರಿಯೆ ವಿಳಂಬಗೊಂಡಿದ್ದರಿಂದ ಹಸ್ತಾಂತರ ವಿಳಂಬಗೊಂಡಿತು ಎಂದು ಹೇಳಿದ್ದಾರೆ.
ಕಳೆದ ವರ್ಷ (ಸೆ.17) ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ನಮೀಬಿಯಾದಿಂದ ಎಂಟು ಚೀತಾಗಳನ್ನು ಕರೆತರಲಾಗಿತ್ತು.
ಚೀತಾವನ್ನು ಭಾರತದ ಅರಣ್ಯಕ್ಕೆ ಮರುಪರಿಚಯಿಸುವ ಉದ್ದೇಶದೊಂದಿಗೆ ಆಫ್ರಿಕಾದಿಂದ ಚೀತಾಗಳನ್ನು ಹಂತ ಹಂತವಾಗಿ ಕರೆ ತರಲಾಗುತ್ತಿದೆ.














