ಮನೆ ಆರೋಗ್ಯ ಉಲ್ಬಣಗೊಂಡ ಕೊರೊನಾ: ದಕ್ಷಿಣ ಕನ್ನಡದಲ್ಲಿ 12 ಶಾಲೆಗಳು ಬಂದ್

ಉಲ್ಬಣಗೊಂಡ ಕೊರೊನಾ: ದಕ್ಷಿಣ ಕನ್ನಡದಲ್ಲಿ 12 ಶಾಲೆಗಳು ಬಂದ್

0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮಕ್ಕಳಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, 400ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಅಲ್ಲದೆ, 68 ಶಾಲಾ ಶಿಕ್ಷಕರಲ್ಲೂ ಸೋಂಕು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೆಚ್ಚು ಸೋಂಕಿರುವ ಶಾಲೆಗಳನ್ನು ಬಂದ್ ಮಾಡುವಂತೆ ಆರೋಗ್ಯ ಇಲಾಖೆ ಸೂಚಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಜನವರಿ 1 ರಿಂದ 27 ರವರೆಗೆ ಒಟ್ಟು 421 ಶಾಲಾ ಮಕ್ಕಳು ಮತ್ತು 68 ಶಿಕ್ಷಕರಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.  ಬೆಳ್ತಂಗಡಿ ಒಂದರಲ್ಲೇ 57 ವಿದ್ಯಾರ್ಥಿಗಳು ಹಾಗೂ 8 ಮಂದಿ ಶಿಕ್ಷಕರಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಮಾಹಿತಿ ನೀಡಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯ ಕೋವಿಡ್ ನೋಡಲ್ ಅಧಿಕಾರಿ ಡಾ.ಅಶೋಕ್ ಮಾತನಾಡಿ, ಐದಕ್ಕಿಂತ ಕಡಿಮೆ ಪ್ರಕರಣಗಳು ವರದಿಯಾದರೂ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಶಾಲೆಗಳ ಮುಖ್ಯಸ್ಥರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. 

ಹಿಂದಿನ ಲೇಖನಜನ್ಮದಿನದ ಅಂಗವಾಗಿ ಗೋ ಪೂಜೆ ಸಲ್ಲಿಸಿದ ಸಿಎಂ: ಗಣ್ಯರಿಂದ ಶುಭಾಶಯ
ಮುಂದಿನ ಲೇಖನದೇವರ ಬಗ್ಗೆ ವಿವಾದಾತ್ಮಕ ಹೇಳಿಕೆ: ನಟಿ ಶ್ವೇತಾ ತಿವಾರಿ ವಿರುದ್ಧ ತನಿಖೆಗೆ ಆದೇಶ