ಮನೆ ಸುದ್ದಿ ಜಾಲ ಟ್ರಕ್ ಪಲ್ಟಿಯಾಗಿ 12 ಕಾರ್ಮಿಕರ ಸಾವು ಮತ್ತು 13 ಜನರಿಗೆ ಗಾಯ

ಟ್ರಕ್ ಪಲ್ಟಿಯಾಗಿ 12 ಕಾರ್ಮಿಕರ ಸಾವು ಮತ್ತು 13 ಜನರಿಗೆ ಗಾಯ

0

ಮಧ್ಯಪ್ರದೇಶ  ಧಾರ್ ಜಿಲ್ಲೆಯಲ್ಲಿ ಏಪ್ರಿಲ್ 30 ಪಿಕಪ್ ಟ್ರಕ್ ಪಲ್ಟಿಯಾಗಿ 12 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಭೀಕರ  ಘಟನೆ ನಡೆದಿದೆ, ಇದರಲ್ಲಿ 13 ಮಂದಿ ಗಾಯಗೊಂಡಿದ್ದು. ಬುಧವಾರ ರಾತ್ರಿ ಈ ರಸ್ತೆ ಅಪಘಾತವು 12 ಜನರ ಬದುಕನ್ನು ಕಸಿದುಕೊಂಡಿದೆ. ಸುಮಾರು 35 ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಪಿಕಪ್ ವಾಹನವು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ರಾತ್ರಿ ಸುಮಾರು  8:30 ಕ್ಕೆ ಹೆದ್ದಾರಿಯ ಪೆಟ್ರೋಲ್ ಪಂಪ್ ಬಳಿ ಈ ರಸ್ತೆ ಅಪಘಾತ ನಡೆದಿದೆ. ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ತುಂಬಿಸಿಕೊಂಡಿದ್ದ ಪಿಕಪ್ ಟ್ರಕ್, ಅತಿ ವೇಗದಿಂದಾಗಿ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಹಲವು ಬಾರಿ ಪಲ್ಟಿಯಾಗಿದೆ. ಈ ಭೀಕರ ದೃಶ್ಯ ಕಂಡ ಪ್ರತ್ಯಕ್ಷದರ್ಶಿಗಳು ಬೆಚ್ಚಿಬಿದ್ದಿದ್ದಾರೆ. ಇದ್ದರಲ್ಲಿ ಹಲವಾರು ಚಿಕ್ಕ ಮಕ್ಕಳೂ ಕೂಡ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯ ನಿವಾಸಿಗಳು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆಗೆ ಬಂದಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದವರನ್ನು ಹೊರತೆಗೆದು ತಕ್ಷಣ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯ ವೈದ್ಯರ ಪ್ರಕಾರ, ಸದ್ಯ 13 ಜನರ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಮದು ತಿಳಿಸಿದ್ದಾರೆ ಎನ್ನಲಾಗಿದೆ.

ಈ ಘಟನೆಯ ಕುರಿತ್ತಾಗಿ  ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ ಎನ್ನಲಾಗಿದೆ.