ಬೆಂಗಳೂರು (Bengaluru)-ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 124 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 39,50,128ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40064 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
159 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,08296ಕ್ಕೆ ಏರಿಕೆಯಾಗಿದೆ. ಇನ್ನು 1726 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 116 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,85,866ಕ್ಕೆ ಏರಿಕೆಯಾಗಿದೆ.