ಮನೆ ರಾಜ್ಯ ರಾಜ್ಯದಲ್ಲಿ 126 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ 126 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru)-ರಾಜ್ಯದಲ್ಲಿ ಕೋವಿಡ್‌ (Covid)ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಯಲ್ಲಿ 126 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 39,49,675ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,063 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

103 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,07,679ಕ್ಕೆ ಏರಿಕೆಯಾಗಿದೆ. ಇನ್ನು 1,891 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 118 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,85,454ಕ್ಕೆ ಏರಿಕೆಯಾಗಿದೆ.