ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1286 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,46,105ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40182ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 2358 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3997181ಕ್ಕೆ ಏರಿಕೆಯಾಗಿದೆ. ಇನ್ನು 8700 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 796 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1861478ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲಿ ಕೋವಿಡ್ ಸೋಂಕಿನಿಂದಾಗಿ ಒಬ್ಬರು ಮೃತಪಟ್ಟಿದ್ದಾರೆ.