ಮನೆ ರಾಜ್ಯ ರಾಜ್ಯದಲ್ಲಿ 129 ಮಂದಿಗೆ ಕೊರೊನಾ ಸೋಂಕು

ರಾಜ್ಯದಲ್ಲಿ 129 ಮಂದಿಗೆ ಕೊರೊನಾ ಸೋಂಕು

0

ಬೆಂಗಳೂರು (Bengaluru)- ರಾಜ್ಯದಲ್ಲಿ ಕೊರೊನಾ (corona) ಸೋಂಕಿನ ಏರಿಳಿತ ಮುಂದುವರೆದಿದ್ದು, ಇಂದು 129 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 39,48,966ಕ್ಕೆ ಏರಿಕೆಯಾಗಿದೆ. ಸೋಂಕಿನಿಂದಾಗಿ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40063 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

128 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,06935ಕ್ಕೆ ಏರಿಕೆಯಾಗಿದೆ. ಇನ್ನು 1926 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 121 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,84,795ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸುಪ್ರೀಂ ತೀರ್ಪು: ಶೀಘ್ರದಲ್ಲೇ ಬಿಬಿಎಂಪಿ ಚುನಾವಣೆ
ಮುಂದಿನ ಲೇಖನಸ್ಥಳೀಯ ಸಂಸ್ಥೆಗಳ ಚುನಾವಣೆಗೆ 2 ವಾರಗಳಲ್ಲಿ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂ ಕೋರ್ಟ್‌ ಸೂಚನೆ