ಮನೆ ರಾಜ್ಯ ರಾಜ್ಯದಲ್ಲಿ 1329 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ 1329 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1329 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,29,446ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಐವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40144ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1614 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3979155ಕ್ಕೆ ಏರಿಕೆಯಾಗಿದೆ. ಇನ್ನು 10105 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 791 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1850840ಕ್ಕೆ ಏರಿಕೆಯಾಗಿದೆ.