ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 133 ಮಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,64,835ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,072 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
517 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,20,283ಕ್ಕೆ ಏರಿಕೆಯಾಗಿದೆ. ಇನ್ನು 4,438 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 131 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,99,823ಕ್ಕೆ ಏರಿಕೆಯಾಗಿದೆ.