ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶ ನಮಗೆ ವಿಶ್ವಾಸ ಹೆಚ್ಚಿಸಿದೆ. ರಾಜ್ಯದಲ್ಲಿ 135 ಸ್ಥಾನಗಳನ್ನ ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಭರವಸೆಯ ನುಡಿಗಳನ್ನಾಡಿದ್ದಾರೆ.
ವಿಧಾನಸಭೆಯಲ್ಲಿ ಇಂದು ಮಾತನಾಡಿದ ಅವರು, 5 ರಾಜ್ಯಗಳ ಗೆಲುವು ವಿಶ್ವಾಸ ಹೆಚ್ಚಿಸಿದೆ. ಸಾಮೂಹಿಕ ನಾಯಕತ್ವದಡಿ ರಾಜ್ಯ ಪ್ರವಾಸ ಮಾಡುತ್ತೇವೆ. 135 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತೇವೆ. ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ ಎಂದರು.
ದೇಶದ ಜನ ಮೋದಿ ಬಿಜೆಪಿ ಪರವಾಗಿದ್ದಾರೆ. ಇದು ಪಂಚರಾಜ್ಯ ಚುನಾವಣಾ ಫಲಿತಾಂಶದಲ್ಲಿ ಸಾಬೀತಾಗಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕ ಕಾಂಗ್ರೆಸ್ ಮುಕ್ತ ದೇಶ ಮಾಡುತ್ತೇವೆ. ಅಧಿವೇಶನ ಮುಗಿದ ಬಳಿಕ ರಾಜ್ಯ ಪ್ರವಾಸ ಮಾಡಿ ಕೇಂದ್ರ ರಾಜ್ಯದ ಕಾರ್ಯಕ್ರಮಗಳ ಬಗ್ಗೆ ಜನರಿಗೆ ತಿಳಿಸುತ್ತೇವೆ ಎಂದು ಬಿಎಸ್ ವೈ ನುಡಿದರು.














