ಮನೆ ಕಾನೂನು ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ಗೆ 14 ದಿನ ನ್ಯಾಯಾಂಗ ಬಂಧನ

ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ಗೆ 14 ದಿನ ನ್ಯಾಯಾಂಗ ಬಂಧನ

0

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ನನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ ಎ) ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಫೆಬ್ರವರಿ 18 ರಿಂದ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಇಕ್ಬಾಲ್ ಕಸ್ಕರ್ ಬಿಲ್ಡರ್ ಅನ್ನು ಸುಲಿಗೆ ಮಾಡಿದ ಕಾರಣ ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿದ್ದಾರೆ.

ಇಡಿ ನ್ಯಾಯಾಲಯಕ್ಕೆ ಸಲ್ಲಿಸಿದ ಐದು ಪುಟಗಳ ರಿಮಾಂಡ್ ಪ್ರತಿಯಲ್ಲಿ, ಕಸ್ಕರ್ ನನ್ನು ಭಾರತಕ್ಕೆ ಗಡೀಪಾರು ಮಾಡಿದ ನಂತರ ಸಹೋದರನ ಜಾಗತಿಕ ಭಯೋತ್ಪಾದಕ ಎಂದು ವಿವಿಧ ಬಿಲ್ಡರ್ ಗಳು ಅಥವಾ ಸೆಲೆಬ್ರಿಟಿಗಳ ಮೇಲೆ ಒತ್ತಡ ಹೇರಿ ಹಣ ವಸೂಲಿ ಮಾಡಲು ಪ್ರಾರಂಭಿಸಿದನು. ಅಲ್ಲದೇ ಕಸ್ಕರ್ ತನ್ನ ಹಿಂಬಾಲಕರನ್ನು ಈ ಕೃತ್ಯಕ್ಕೆ ಬಳಸಿಕೊಂಡಿದ್ದು, ದಾವೂದ್ ಇಬ್ರಾಹಿಂ ಪರವಾಗಿ ಹಣ ಸಂಗ್ರಹಿಸಿದ್ದ ಎಂದು ತನಿಖಾ ಸಂಸ್ಥೆ ಹೇಳಿದೆ. ಜೊತೆಗೆ ಈ ಮೂಲಕ ಗಣನೀಯ ಆದಾಯ ಪಡೆದುಕೊಳ್ಳುತ್ತಿದ್ದಾನೆ ಎಂಬುದರ ಬಗ್ಗೆ ನಮ್ಮ ಬಳಿ ಪುರಾವೆಗಳಿವೆ ಎಂದು ಇಡಿ ಹೇಳಿದೆ.

ಕಸ್ಕರ್ ಒಂದು ಫ್ಲಾಟ್ ಮತ್ತು 90 ಲಕ್ಷ ಸುಲಿಗೆ ಹಣ ಪಡೆದಿದ್ದಾರೆ ಎಂದು ರಿಮಾಂಡ್ ಪ್ರತಿಯಲ್ಲಿ ತಿಳಿಸಲಾಗಿದೆ. ಹಾಗಾಗಿ ತನಿಖೆ ಇನ್ನೂ ನಡೆಯುತ್ತಿರುವುದರಿಂದ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ತೆಗೆದುಕೊಳ್ಳಬಹುದು ಎಂದು ನ್ಯಾಯಾಲಯ ಹೇಳಿದೆ.