ಮನೆ ರಾಜ್ಯ ರಾಜ್ಯದಲ್ಲಿ 1456 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 1456 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1456 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,94,627ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40090 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ 1096 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,45,647ಕ್ಕೆ ಏರಿಕೆಯಾಗಿದೆ. ಇನ್ನು 8848 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ 1154 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,26,385ಕ್ಕೆ ಏರಿಕೆಯಾಗಿದೆ.

ಹಿಂದಿನ ಲೇಖನಬೆನ್ನು ನೋವಿನ ನಿವಾರಣೆಗೆ ಮಾಡಬೇಕಾದ ವ್ಯಾಯಾಮಗಳು
ಮುಂದಿನ ಲೇಖನಇಂದಿನ ರಾಶಿ ಭವಿಷ್ಯ