ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,465 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,43,564ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,176ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ 1,295 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,92,637ಕ್ಕೆ ಏರಿಕೆಯಾಗಿದೆ. ಇನ್ನು 10,709 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 987 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,59,935ಕ್ಕೆ ಏರಿಕೆಯಾಗಿದೆ.